c ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳುಗಳೇ ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸಹಿತ ಸಂಪುಟ ಸಚಿವರು ಆರೋಪಿಸುತ್ತಿದ್ದರು.
Lok Sabha Election ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದ್ದು ಇನ್ನು 14 ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿ ರೈತರು ಸಂಕಷ್ಟ ಅನುಭವಿಸಿದ್ದರು