Lok Sabha Election ಹದಿನೆಂಟನೇ ಲೋಕಸಭೆಗೆ ನಡೆದ ಚುನಾವಣೆಯ ಮೊದಲ ಹಂತದಲ್ಲಿ
ರಾಜ್ಯದಲ್ಲಿ ಶೇ69 ಮತದಾನ ಆಗಿದೆ
ರಾಜ್ಯದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದ್ದು, ಜನ ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ.
Lok Sabha Election ಮಂಡ್ಯ-ಶೇ.74.87, ಕೋಲಾರ-ಶೇ.73.25, ಉಡುಪಿ ಚಿಕ್ಕಮಗಳೂರು-ಶೇ.76.06, ದಕ್ಷಿಣ ಕನ್ನಡ-ಶೇ.76.05, ಹಾಸನ-ಶೇ.72.13, ತುಮಕೂರು-ಶೇ.72.10, ಚಿಕ್ಕಬಳ್ಳಾಪುರ-ಶೇ.71.85, ಚಾಮರಾಜನಗರ- ಶೇ.69.86, ಚಿತ್ರದುರ್ಗ-ಶೇ.67.52, ಮೈಸೂರು-ಶೇ.67.55, ಬೆಂಗಳೂರು ಗ್ರಾಮಾಂತರ-ಶೇ.61.78, ಬೆಂಗಳೂರು ಉತ್ತರ-ಶೇ.51.51, ಬೆಂಗಳೂರು ಕೇಂದ್ರ-ಶೇ.49.77 ಹಾಗೂ ಬೆಂಗಳೂರು ದಕ್ಷಿಣ-ಶೇ.49.37ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿತ್ತು. ರಾಜ್ಯದಲ್ಲಿ ಶೇ.69ರಷ್ಟು ಮತದಾನ ಆಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.74.87ರಷ್ಟು ಮತದಾನ ಆಗಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.49.37ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆ ವೇಳೆಗೆ ಮತದಾನ ಪ್ರಕ್ರಿಯೆ ಮುಗಿಯಿತು.