Monday, December 15, 2025
Monday, December 15, 2025

Siddharamaih ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯ ಬರಪರಿಹಾರ ಬಿಡುಗಡೆ, ರಾಜ್ಯ ಬಿಜೆಪಿ ನಾಯಕರ ಪಾತ್ರವೇನೂ ಇಲ್ಲ-ಸಿದ್ಧರಾಮಯ್ಯ

Date:

Siddharamaih ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3, 454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರ ಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.
Siddharamaih ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...