Thursday, September 17, 2026
Thursday, September 17, 2026

K.S.Eshwarappa ರಾಜ್ಯ ಲೋಕಾಸಭಾಕ್ಷೇತ್ರಗಳಲ್ಲಿ ಎಷ್ಟು ಬೂತ್ ಇವೆ ಎಂಬುವುದೇ ವಿಜಯೇಂದ್ರಗೆ ತಿಳಿದಿಲ್ಲ- ಈಶ್ವರಪ್ಪ ವಿಡಂಬನೆ

Date:

K.S.Eshwarappa ಯಡಿಯೂರಪ್ಪ ಅವರಿಗೆ ಮೋದಿ ಬಗ್ಗೆ ಗೌರವ ಇದ್ದರೆ, ಅವರ ಸಿದ್ಧಾಂತ ಒಪ್ಪಿಕೊಳ್ಳುವುದಾದರೆ ತಕ್ಷಣವೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ ಅವರ ಕುಟುಂಬ ರಾಜಕೀಯವನ್ನು ಟೀಕಿಸಿದ್ದಾರೆ. ಈ ವೇಳೆ ಅವರ ಪಕ್ಕದಲ್ಲೇ ಯಡಿಯೂರಪ್ಪ ಅವರು ಕೂತಿದ್ದಾರೆ. ಇವರಿಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ಇಲ್ಲ, ಮೋದಿ ಸಭೆಗೆ ಯಡಿಯೂರಪ್ಪ ಅವರು ಹೋಗಬಾರದು ಎಂದು ಹರಿಹಾಯ್ದರು.

K.S.Eshwarappa ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲೂ ಬಿಜೆಪಿ ಹೆಚ್ಚು ಮತಗಳು ಬರುತ್ತಿದ್ದೇವೆ ಎಂದರೆ ಅದಕ್ಕೆ ನರೇಂದ್ರ ಮೋದಿ ಕಾರಣ. ರಾಜ್ಯದಲ್ಲೂ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ಕೊಡುತ್ತಿದ್ದಾರೆ ವಿನಾ: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಯಾರೂ ಕೂಡ ಮತ ಹಾಕುತ್ತಿಲ್ಲ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಬೂತ್‌ ಇದೆ ಎಂಬುದೇ ವಿಜಯೇಂದ್ರರಿಗೆ ಗೊತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕೋಟ್ಯಾಂತರ ರುಪಾಯಿ ಹಣ ಸುರಿದರೂ ಅವರಿಗೆ 60 ಸಾವಿರ ಲೀಡ್‌ನಿಂದ ಕೇವಲ 10 ಲೀಡ್‌ ಬಂದರು. ಅಂತರ ಯಾಕೆ ಕಡಿಮೆಯಾಗಿದೆ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...