Saturday, June 21, 2025
Saturday, June 21, 2025

Samruddhi Manjunath ಪ್ರಜ್ವಲ್ ಅವರನ್ನ ಪಕ್ಷದಿಂದ ಉಚ್ಚಾಟಿಸಲು ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹ

Date:

Samruddhi Manjunath ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮತ್ತೋರ್ವ ‘ದಳ’ ಶಾಸಕ ಬಹಿರಂಗವಾಗಿ ಆಗ್ರಹಿಸಿದ್ದಾರೆ. “
19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ಪ್ರಜ್ವಲ್ ರೆವಣ್ಣ ಮುಖ್ಯವೋ ತೀರ್ಮಾನಿಸಬೇಕಿದೆ, 24 ಗಂಟೆಗಳಲ್ಲಿ ಆರೋಪ ಹೊತ್ತಿರುವ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು’ ಎಂದು ಮುಳಬಾಗಿಲು ಎಂಎಲ್‌ಎ ಸಮೃದ್ಧಿ ಮಂಜುನಾಥ್ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇತ್ತಿಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ, ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ” ಎಂದು ಅವರು ಬೇಸರ ಹೊರಹಾಕಿದ್ದಾರೆ.

ಈ ಕುರಿತು ಅವರು ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

Samruddhi Manjunath “ಮಾನ್ಯ ವರಿಷ್ಠರು, ರಾಷ್ಟ್ರಾಧ್ಯಕ್ಷರು ಎಚ್.ಡಿ.ದೇವೇಗೌಡ ಅಪ್ಪಾಜಿ ರವರು, ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಣ್ಣರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ವಿನಂತಿಸಿಕೊಳ್ಳುವುದೇನೆಂದರೆ, 19 ಜನ ಶಾಸಕರ ಭವಿಷ್ಯ ಬೇಕೋ; ತಮ್ಮ ಕುಟುಂಬದ ಪ್ರಜ್ವಲ್ ರೇವಣ್ಣರವರು ಮುಖ್ಯವೋ ತೀರ್ಮಾನಿಸಬೇಕಿದೆ.

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ, ಪಕ್ಷದ ಸಿದ್ಧಾಂತಗಳನ್ನು ಉಳಿಸಿ, ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...