Monday, August 3, 2026
Monday, August 3, 2026

Lok Sabha Election ಕೇಂದ್ರ ಮಲತಾಯಿ ಧೋರಣೆ,ರಾಜ್ಯದ ಆರ್ಥಿಕ ಪರಿಸ್ಥಿತಿ ಕುಸಿಯುವಂತೆ ಮಾಡಿದೆ-ಮಯೂರ್ ಜಯಕುಮಾರ್

Date:

Lok Sabha Election ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ರಾಜ್ಯದ ಆರ್ಥಿಕ ಸ್ಥಿತಿ ಕುಸಿಯುವಂತೆ ಮಾಡಿದ ಮೋದಿ ಸರ್ಕಾರದ ಇಬ್ಬಗೆಯ ನೀತಿಯ ಬಗ್ಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ,ವೀಕ್ಷಕ ಮಯೂರ್ ಜಯಕುಮಾರ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ದ ಅವರು, ರಾಜ್ಯಕ್ಕೆ ಬರಬೇಕಾದ ಬರಪರಿಹಾರದ ಹಣವನ್ನು ಕೊಡದ ಕೇಂದ್ರ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ,ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿಯನ್ನು ಅನುಸರಿಸಿದೆ.ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣದ ಪಾಲನ್ನು ನೀಡಿಲ್ಲ ಎಂದರು.
Lok Sabha Election ರಾಜ್ಯ ಕಾಂಗ್ರೆಸ್ ಸರ್ಕಾರದ ಯಶಸ್ವಿ ಗ್ಯಾರಂಟಿ ಯೋಜನೆಯು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿ ಆಗಲಿದೆ,ಕೇಂದ್ರದ ಮೋದಿ ಸರ್ಕಾರದ ಸುಳ್ಳುಗಳನ್ನು ಕೇಳಿ ರಾಜ್ಯದ ಜನತೆ ಬೇಸತ್ತಿದ್ದಾರೆ,ಕಳೆದ ಹತ್ತು ವರುಷಗಳ ಆಡಳಿತ ನೆಡೆಸಿದ ಕೇಂದ್ರ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ,ರೈತರಿಗೆ ನೀಡಿದ ಕೊಡುಗೆಯಾದರೂ ಏನು? ರಾಜ್ಯದ ಪಾಲು ತೆರಿಗೆ ಕೇಳುವುದು ನಮ್ಮ ಹಕ್ಕು,ರಾಜ್ಯದ ಪಾಲನ್ನು ಕೊಡದೆ ಕರ್ನಾಟಕ ರಾಜ್ಯಕ್ಕೆ ದ್ರೋಹ ಎಸಗಿದೆ,ಈ ರಾಜ್ಯದಿಂದ ಗೆದ್ದು ಹೋದ ೨೭ಸಂಸದರು ರಾಜ್ಯಕ್ಕೆ ನೀಡಿದ ಕೊಡುಗೆಯಾದರೂ ಏನು ಎಂಬುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಲಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...