Tuesday, February 3, 2026
Tuesday, February 3, 2026

Consumer Disputes Redressal Commission ಕಾರು ಅಪಘಾತ,ಗ್ರಾಹಕರಿಗೆ ವಿಮೆ ಪರಿಹಾರ ಒದಗಿಸಲು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು

Date:

Consumer Disputes Redressal Commission ಅರ್ಜಿದಾರರಾದ ಅಫ್ತಾಬ್ ಅಹ್ಮದ್ ಎಂಬುವವರು ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ, ಬೆಂಗಳೂರು ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಪಾಲಿಸಿಯ ಮೊತ್ತ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ.

ಅರ್ಜಿದಾರರ ರೆನುಲ್ಟ್ ಕ್ವಿಡ್ ಮೋಟಾರ್ ಕಾರ್ ಜನವರಿ 20, 2022 ರಂದು ಅಪಘಾತಕ್ಕೊಳಗಾಗಿ ಹಾನಿಯಾಗಿದ್ದು, ಈ ಸಂಬಂಧ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನು ಸಂಪರ್ಕಿಸಿ ರಿಪೇರಿ ಖರ್ಚು ರೂ. 3,92,350/- ಗಳ ವಿಮಾ ಪರಿಹಾರ ಮೊತ್ತ ಸಂದಾಯ ಮಾಡುವಂತೆ ಕೋರಿರುತ್ತಾರೆ.

ಆದರೆ ಕಂಪನಿಯವರು ನಿಗದಿತ ಅವಧಿಯೊಳಗೆ ಸೂಕ್ತ ದಾಖಲೆಗಳನ್ನು ಒದಗಿಸಿರುವುದಿಲ್ಲ ಹಾಗೂ ಇನ್ಸೂರೆನ್ಸ್ ಮೊತ್ತ ರೂ. 3.50ಲಕ್ಷಗಳು ಮಾತ್ರ ಆಗಿದೆ ಎಂಬ ಕಾರಣ ನೀಡಿ ಪರಿಹಾರ ಮೊತ್ತ ನೀಡಲು ನಿರಾಕರಿಸಿರುತ್ತಾರೆ.

ಆಯೋಗವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ಅರ್ಜಿದಾರರ ಸಾಕ್ಷ್ಯ ವಿಚಾರಣೆಯ ವಿವರ ಮತ್ತು ಹಾಜರುಪಡಿಸಲಾದ ದಾಖಲೆಗಳ ಆಧಾರದ ಮೇಲೆ ಅರ್ಜಿದಾರರ ವಾಹನವು ಸರ್ವಿಸ್ ಸೆಂಟರ್‍ನಲ್ಲಿ ರಿಪೇರಿಗೊಂಡಿಲ್ಲವಾದ್ದರಿಂದ ಬಿಲ್ಲುಗಳನ್ನು ಹಾಜರುಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪಾಲಿಸಿಯ ಷರತ್ತು ಮತ್ತು ನಿಬಂಧನೆಗಳ ಪ್ರಕಾರ ಅರ್ಜಿದಾರರ ಇನ್ಸೂರ್ಡ್ ಡಿಕ್ಲೇರ್ಡ್ ವ್ಯಾಲ್ಯೂ ರೂ. 3.50 ಲಕ್ಷಗಳನ್ನು ಪಡೆಯಲು ಅರ್ಹರಾಗಿರುತ್ತಾರೆಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.

Consumer Disputes Redressal Commission ಎದುರುದಾರು ಅರ್ಜಿದಾರರಿಗೆ ಪಾಲಿಸಿಗೆ ಅನುಗುಣವಾಗಿ ಬಸ್ ರಿ¥ ಇನ್ಸೂರ್ಡ್ ಡಿಕ್ಲೇರ್ಡ್ ವ್ಯಾಲ್ಯೂ ರೂ. 3.50 ಲಕ್ಷಗಳನ್ನು ಶೇ.9% ವಾರ್ಷಿಕ ಬಡ್ಡಿಯೊಂದಿಗೆ ಪಾವತಿಸುವುದು. ಹಾಗೂ ತಮ್ಮ ಸೇವಾ ನ್ಯೂನತೆಯಿಂದಾಗಿ ಉಂಟಾದ ಮಾನಸಿಕ ಹಿಂಸೆ ಮತ್ತು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರ ಹಾಗೂ ರೂ.50,000/- ಗಳನ್ನು ಮತ್ತು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ರೂ. 10,000/-ಗಳನ್ನು ಈ ಆದೇಶವಾದ 45 ದಿನಗಳೊಳಗಾಗಿ ಪಾವತಿಸಬೇಕೆಂದು ನಿರ್ದೇಶಿಸಿ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಮಹಿಳಾ ಸದಸ್ಯರಾದ ಸವಿತಾ ಬಿ.ಪಟ್ಟಣಶೆಟ್ಟಿ, ಮತ್ತು ಸದಸ್ಯ ಬಿ.ಡಿ.ಯೋಗಾನಂದ ಭಾಂಡ್ಯ ಇವರ ಪೀಠವು ಏ.30 ರಂದು ಆದೇಶಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...