Thursday, March 19, 2026
Thursday, March 19, 2026

Lok Sabha Election ಮತದಾನದ ಹಿಂದಿನ ದಿನ ಮುದ್ರಣ ಮಾಧ್ಯಮ ಜಾಹೀರಾತು ಪ್ರಕಟಿಸುವಲ್ಲಿ ಆಯೋಗದ ನಿಯಮಾವಳಿ

Date:

Lok Sabha Election ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ 07 ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ ಮಾಧ್ಯಮದಲ್ಲಿ ಯಾವುದೇ ರೀತಿಯ ರಾಜಕೀಯ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಚುನಾವಣೆಯ ಕಡೆಯ ಹಂತದಲ್ಲಿ ಆಕ್ಷೇಪಾರ್ಹ ಮತ್ತು ತಪ್ಪುದಾರಿಗೆಳೆಯುವ ಜಾಹಿರಾತುಗಳನ್ನು ಪ್ರಕಟಿಸಿದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹದಗೆಡಿಸುವ ಸಂಭವ ಇರುವ ಕಾರಣ ಮುದ್ರಣ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಜಾಹಿರಾತು ಪ್ರಕಟಿಸುವ ಎರಡು ದಿನಗಳ ಮುಂಚಿತವಾಗಿ ಎಂಸಿಎಂಸಿ ಗೆ ಅರ್ಜಿ ಸಲ್ಲಿಸಬೇಕು.

ಮೇ 06 ಮತ್ತು 07 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಜಾಹಿರಾತು ಪ್ರಕಟಿಸುವ 2 ದಿನ ಮುಂಚಿತವಾಗಿ ಪೂರ್ವಾನುಮತಿ ಪಡೆಯಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.

ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಪೂರ್ವಾನುಮತಿಗೆ ಅರ್ಜಿ ಲಭ್ಯ:

Lok Sabha Election ಮೇ 06 ಮತ್ತು 07 ರಂದು ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹಿರಾತು ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೊಗ್ಗ ಈ ಕಚೇರಿಯಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...