Wednesday, September 16, 2026
Wednesday, September 16, 2026

Rotary Shivamogga ದೇಶಸೇವೆಯಲ್ಲಿನ ತೃಪ್ತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ-ಕುಮಾರನಾಯ್ಕ

Date:

Rotary Shivamogga ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಂದು ಮನೆಯಲ್ಲೂ ಯೋಧ ಇರಬೇಕು. ದೇಶಸೇವೆಗಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ ಎಂದು ನಿವೃತ್ತ ಯೋಧ ಆರ್.ಕುಮಾರನಾಯ್ಕ ಹೇಳಿದರು.

ಶಿವಮೊಗ್ಗ ನಗರದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಯೋಧರನ್ನು ಸ್ವಾಗತಿಸಿ ಗೌರವಿಸಿ ಅಭಿನಂದಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಕುಮಾರನಾಯ್ಕ ಅವರ ಕುಟುಂಬದಲ್ಲಿ ಇಬ್ಬರು ದೇಶ ಸೇವೆಯಲ್ಲಿ ನಿರತರಾಗಿದ್ದು, ಸೇನೆಯಲ್ಲಿ ಕೆಲಸ ಮಾಡಿದ್ದಾರೆ. ನಿವೃತ್ತ ಸೈನಿಕರಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಭಿಪ್ರಾಯಪಟ್ಟರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಕುಮಾರನಾಯ್ಕ ಅವರು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಅವರ ಸೈನ್ಯದ ಸೇವೆ ಯುವಜನತೆಗೆ ಮಾದರಿ ಆಗಬೇಕು. ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ವಿಶೇಷ ಸೌಕರ್ಯಗಳಿವೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

Rotary Shivamogga ಸೇನೆಯಲ್ಲಿ ಕೆಲಸ ಮಾಡಲು ಯುವಜನತೆ ಹಿಂದೇಟು ಹಾಕುತ್ತಿದ್ದಾರೆ. ದೇಶಕ್ಕಾಗಿ ಕೆಲಸ ಮಾಡುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದರು. ಇಂಡೋ ಟಿಬೆಟಿಯನ್ ಬಾರ್ಡರ್‌ನಲ್ಲಿ 21 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಬೀರನಕೆರೆ ಗ್ರಾಮದ ಯೋಧ ಆರ್.ಕುಮಾರನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಶಿವಮೊಗ್ಗ ಪೂರ್ವ ನಿಯೋಜಿತ ಕಾರ್ಯದರ್ಶಿ ಶಶಿಕಾಂತ ನಾಡಿಗ್, ಮಾಜಿ ಅಧ್ಯಕ್ಷ ಮಂಜುನಾಥ ಕದಂ, ಸಂತೋಷ್, ಬಸವರಾಜ್, ಚಂದ್ರನಾಯ್ಕ್, ಓಂಕಾರನಾಯ್ಕ್, ಗಣೇಶನಾಯ್ಕ್, ಕುಜೇಂದ್ರನಾಯ್ಕ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...