Department of Handlooms and Textiles 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.
ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
Department of Handlooms and Textiles ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ -08182-223405 ನ್ನು ಸಂಪರ್ಕಿಸುವುದು. ಆನ್‍ಲೈನ್ https://khtigadag.ac.in/AdmissionForm.pdf ರಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 31/05/2024 ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-ಬೆಟಗೆರಿ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ ತಿಳಿಸಿದ್ದಾರೆ.