Saturday, December 6, 2025
Saturday, December 6, 2025

Department of Handlooms and Textiles ಕೈಮಗ್ಗ & ಜವಳಿ ತಂತ್ರಜ್ಞಾನ 2 ನೇ ವರ್ಷದ ಡಿಪ್ಲೊಮಾಗೆ ಲ್ಯಾಟರಲ್ ಎಂಟ್ರಿ ಸೌಲಭ್ಯ

Date:

Department of Handlooms and Textiles ಶಿವಮೊಗ್ಗ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೊಮಾ ಕೋರ್ಸ್ ಸೇರಲು ಸಾಮಾನ್ಯ ವರ್ಗದವರಿಗೆ 25 ಹಾಗೂ ಪ.ಜಾ./ಪ.ಪಂ. ದವರಿಗೆ 27 ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 10ನೇ ತರಗತಿ ತೇರ್ಗಡೆ ಜೊತೆಗೆ 2 ವರ್ಷಗಳ ಐಟಿಐ ತೇರ್ಗಡೆಯಾದವರು ಅಥವಾ 10+2 ಜೊತೆಗೆ 2 ವರ್ಷಗಳ ಐಟಿಐ ತೇರ್ಗಡೆಯಾದವರು ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‍ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ. ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್‍ನ್ನು ಅಭ್ಯಾಸ ಮಾಡಬೇಕು.

ಗದಗ, ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 13 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 14, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ವೆಂಕಟಗಿರಿಯ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಅಭ್ಯರ್ಥಿಗಳು, ಕೇರಳದ ಕಣ್ಣೂರು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 2 ಅಭ್ಯರ್ಥಿಗಳು ಒಟ್ಟು 27 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/-ರಂತೆ ಶಿಷ್ಯವೇತನ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಕ.ಕೈ.ಮ.ಮ.ಜ.ಇಲಾಖೆಯ ಉಪ ನಿರ್ದೇಶಕರು ತಿಳಿಸಿರುತ್ತಾರೆ.

Department of Handlooms and Textiles ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ:31/05/24 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂ.ಸಂ.: 08372-297221/ 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಶಿವಮೊಗ್ಗ ದೂ.ಸಂ.: 08182-223405 ಅಥವಾ ಇಲಾಖೆ ವೆಬ್‍ಸೈಟ್ https://khtigadag.ac.in/lateralentryadmissionorm.pdf ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...