Wednesday, October 2, 2024
Wednesday, October 2, 2024

Youth Hostel Association ಪ್ರಕೃತಿಯನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದು – ರವಿ ಕುಮಾರ್

Date:

Youth Hostel Association ಪ್ರಕೃತಿಯ ಮಡಿಲು ಸರ್ವರನ್ನು ಸಂತೋಷದಿಂದ ಇರುವಂತೆ ಮಾಡುತ್ತದೆ. ಆದ್ದರಿಂದ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದು ಎಂದು ಯೂತ್ ಹಾಸ್ಟೆಲ್ ರಾಷ್ಟ್ರೀಯ ಉಪಾಧ್ಯಕ್ಷ ಮೈಸೂರಿನ ರವಿಕುಮಾರ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದಿಂದ ಗೌರವ ಸ್ವೀಕರಿಸಿ ಮಾತನಾಡಿದರು.

ಪ್ರತಿಯೊಬ್ಬರು ಅರೋಗ್ಯದಿಂದ ಇರಲು ವ್ಯಾಯಾಮ, ಚಾರಣ, ಸೈಕ್ಲಿಂಗ್ ಅತಿ ಮುಖ್ಯ. ಈ ನಿಟ್ಟಿನಲ್ಲಿ ಯೂತ್ ಹಾಸ್ಟೆಲ್ ಅತ್ಯಂತ ಕಡಿಮೆ ಖರ್ಚನಲ್ಲಿ ಸುರಕ್ಷಿತವಾಗಿ ಹಾಗೂ ಅತ್ಯುತ್ತಮ ಪ್ರದೇಶಗಳಿಗೆ ದೇಶದ್ಯಾಂತ ವರ್ಷವೀಡಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಚೇರ‍್ಮನ್ ವಾಗೇಶ್, 115 ವರ್ಷಗಳ ಇತಿಹಾಸ ಇರುವ ಯೂತ್ ಹಾಸ್ಟೆಲ್ ಜೆರ್ಮನಿಯಲ್ಲಿ ಪ್ರಾರಂಭಗೊಂಡು, ನಲವತ್ತು ವರ್ಷಗಳ ನಂತರ ಭಾರತದ ಮೈಸೂರಿನಲ್ಲಿ ಪ್ರಾರಂಭಗೊಂಡಿತು. ಈ ಸಂಸ್ಥೆ ಇಂದಿಗೆ 75 ವರ್ಷ ಆಗಿದೆ. ಈ ಸಂದರ್ಭದಲ್ಲಿ ನಮ್ಮ ಘಟಕ 75 ಸಮಾರಂಭ ಏರ್ಪಡಿಸಲು ತೀರ್ಮಾನಿಸಿದೆ. ದೇಶದಲ್ಲಿ ಸದಸ್ಯತ್ವದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ ಇದ್ದು, ನಾವೆಲ್ಲರೂ ಸೇರಿ ಪ್ರಥಮ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಎಂದರು.

Youth Hostel Association ಅಧ್ಯಕ್ಷತೆ ವಹಿಸಿದ್ದ ಎನ್.ಗೋಪಿನಾಥ್ ಮಾತನಾಡಿ, ರಾಷ್ಟೀಯ ಕಾರ್ಯಕ್ರಮಗಳಲ್ಲಿ ನಮ್ಮ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ವಿದೇಶ ಪ್ರವಾಸಕ್ಕೆ ಹೆಚ್ಚಿನ ಬೇಡಿಕೆ ಇದೆ. ಈಗಾಗಲೇ ಶ್ರೀಲಂಕಾಕ್ಕೆ ಪ್ರವಾಸ ಏರ್ಪಡಿಸಲಾಗಿದೆ. ಇತರೆ ದೇಶಗಳಿಗೂ ಕಡಿಮೆ ಖರ್ಚಿನಲ್ಲಿ ಏರ್ಪಡಿಸಬೇಕು ಎಂದು ಹೇಳಿದರು.

ಮಾಜಿ ರಾಜ್ಯ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತಾನಾಡಿ, ಹಿಮಾಲಯದಲ್ಲಿ ಇರುವಷ್ಟು ಅವಕಾಶ, ನಮ್ಮ ಪಶ್ಚಿಮ ಘಟ್ಟಗಳಲ್ಲು ಚಾರಣಕ್ಕೆ ಉತ್ತಮ ಅವಕಾಶ ಇದೆ. ಈ ನಿಟ್ಟಿನಲ್ಲಿ ಗಮನಹರಿಸಿದರೆ ರಾಜ್ಯ ಪ್ರವಾಸೋದ್ಯಮಕ್ಕೆ ಸಹಕಾರಿಯಾಗಿ ಉದ್ಯೋಗ ಸೃಷ್ಠಿಯಾಗುತ್ತದೆ ಎಂದು ತಿಳಿಸಿದರು.

ಡಾ. ಪ್ರಕೃತಿ ಮಂಚಾಲೆ, ಭಾರತಿ ಗುರುಪಾದಪ್ಪ, ಮಲ್ಲಿಕಾರ್ಜುನ್, ದಿಲೀಪ್ ನಾಡಿಗ್, ನಾಗರಾಜ್, ಸತೀಶ್, ಗೋಪಮ್ಮ, ಪರಶಿವಮೂರ್ತಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...