Unorganized Workers Social Security Board ಕಳೆದ 70 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಸರ್ಕಾರ ಬಡವರ, ಕಾರ್ಮಿಕರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ೧೦ ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ ಎಂದು ಅಸಂಘಟಿತ ಕಾರ್ಮಿಕರ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಕಾರ್ಮಿಕ ಸಮುದಾಯದವರಲ್ಲಿ ಮನವಿ ಮಾಡಿದರು.
ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ೨ ಕೋಟಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಮೋದಿಯವರನ್ನು ಕೇಳಿದರೆ ಪಕೋಡ ಮಾರಿ ಎಂದು ಹೇಳುತ್ತಾರೆ ಎಂದರು.
Unorganized Workers Social Security Board ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಒಂದೂ ಮಾತನಾಡಿಲ್ಲ. ಕಾರ್ಮಿಕರಿಗೆ, ಕೃಷಿ ಕೂಲಿಕಾರ್ಮಿಕರಿಗೆ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪುನರಾರಂಭಿಸಿದರೆ ಸುಮಾರು ೧೦ ಸಾವಿರ ಯುವಕರಿಗೆ ಉದ್ಯೋಗ ಸಿಗುತ್ತದೆ. ಸಂಸದರು ಕಾರ್ಖಾನೆ ಪುನರಾರಂಭಿಸುವ ಭರವಸೆ ನೀಡುತ್ತಿದ್ದಾರೆಯೇ ಹೊರತೂ ಕೇಂದ್ರದಿAದ ಅನುದಾನ ತಂದು ಕಾರ್ಮಿಕರಿಗೆ ಬದುಕಿಗೆ ನೆರವಾಗುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.