K.S.Eshwarappa ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣದ ಕುರಿತು ಸಂಸದರಾದ ಬಿ.ವೈ.ರಾಘವೇಂದ್ರ ಅವರನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು.ಈ ಸುಳ್ಳು ಸುದ್ದಿ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ಬೆಳಕಿಗೆ ಬರಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದ್ದಾರೆ.
ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮತದಾನದ ಹೊತ್ತಿಗೆ ಗೊಂದಲ ನಿರ್ಮಾಣವಾಗಿತ್ತು.ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿರುವುದು ಗಮನಾರ್ಹ. ಮುಸ್ಲಿಮರು ಹೆಚ್ಚು ಮತದಾನ ಮಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತದೆಯೋ ಇಲ್ಲವೊ ಅನ್ನುವುದು ವಿಶ್ಲೇಷಣೆ ಮಾಡಬೇಕಿದೆ. ಇವೆರಡು ಹೊರತು ಚುನಾವಣೆಯಲ್ಲಿ ತನಗೆ ಗೆಲ್ಲುವಾಗಲಿದೆ ಎಂದಿದ್ದಾರೆ.
K.S.Eshwarappa ಈಗಾಗಲೇ ಚುನಾವಣಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದು. ಮೇ 15ರವರೆಗೆ ಗಡುವು ನೀಡುತ್ತೇನೆ. ಒಂದು ವೇಳೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.