Basava Jayanti ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಮಹಾ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಾವೆಲ್ಲ ವಿಶ್ವಗುರು ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವ ಗುರುತರ ಹೊಣೆಗಾರಿಕೆ ನಮ್ಮದಾಗಿದೆ ಎಂದು ತಿಳಿಸಿದರು.
Basava Jayanti ಇದೇ ಸಂದರ್ಭದಲ್ಲಿ ವಚನ ಗಾಯನವನ್ನು ಶ್ರೀಮತಿ ಶಾಂತ ಆನಂದ್, ಭಾರತಿ ಚಂದ್ರಶೇಖರ, ಕಿರಣ್ ದೇಸಾಯಿ, ಪೂಜಾ ನಾಗರಾಜ್ ಪರಿಸರ ನಡೆಸಿಕೊಟ್ಟರು. ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ರವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್, ಪ್ರಮುಖರಾದ ಶ್ರೀ ಎಸ್ ಪಿ ದಿನೇಶ್, ಬಳ್ಳಕೆರೆ ಸಂತೋಷ್,ರೋಟರಿ
ಜಿ ವಿಜಯ್ ಕುಮಾರ್, ಡಾ.ನಾಗರಾಜ್ ಪರಿಸರ, ಎ ಎಸ್ ಚಂದ್ರಶೇಖರ್ ಇನ್ನಿತರರಿದ್ದರು.