Thursday, June 18, 2026
Thursday, June 18, 2026

Prashanth Makanur ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ ಮಾಕನೂರ್ ಬಂಧನ ನಿರೀಕ್ಷಣಾ ಜಾಮೀನು‌ ಕಾರಣ:ಬಿಡುಗಡೆ

Date:

Prashanth Makanur ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಅವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದ ಅವರನ್ನು ಬಿಡುಗಡೆ ಮಾಡಲಾಗಿದೆ.

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ , ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದರು.

ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಬೆಳಗ್ಗೆ 11 ಗಂಟೆ ವೇಳೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

Prashanth Makanur ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು.
ಈ ವಿಡಿಯೋ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಕನೂರು ಅವರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...