Friday, June 19, 2026
Friday, June 19, 2026

Devaraje Gowda ಪ್ರಜ್ವಲ್ ‌ಪೆನ್ ಡ್ರೈವ್ ಪ್ರಕರಣ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರಬಂಧನ

Date:

Devaraje Gowda ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ಜಿ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ.
ಪೆನ್ ಡ್ರೈವ್‌ನಲ್ಲಿದ್ದ ಸ್ಪಷ್ಟ ವೀಡಿಯೊವನ್ನು ಸೋರಿಕೆ ಮಾಡಿದ ಆರೋಪ ಮತ್ತು ಮಹಿಳೆಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ದೇವರಾಜೇಗೌಡನನ್ನು ಬಂಧಿಸಲಾಗಿದೆ. ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಶುಕ್ರವಾರ ರಾತ್ರಿ ಹಿರಿಯೂರು ಗ್ರಾಮಾಂತರ ಪೊಲೀಸರು ದೇವರಾಜೇಗೌಡನನ್ನು ಬಂಧಿಸಿದ್ದಾರೆ.
ದೇವರಾಜೇಗೌಡ ನಿವೇಶನವನ್ನು ಮಾರಾಟ ಮಾಡಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎ.1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಆತನ ವಿರುದ್ಧವು ಪ್ರಕರಣ ದಾಖಲಾಗಿತ್ತು.

Devaraje Gowda ದೇವರಾಜೇಗೌಡ ಯಾರು?
ಬಿಜೆಪಿ ನಾಯಕ ಮತ್ತು ವೃತ್ತಿಯಲ್ಲಿ ವಕೀಲರಾಗಿರುವ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಸಿದ್ದರು. ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡರೆ ಪ್ರಭಾವ ಬೀರುವ ಸಾಧ್ಯತೆ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ. ಆದರೆ, ಗೌಡರು ತಮಗೆ ವಿಡಿಯೊಗಳ ಕುರಿತ ಪತ್ರವನ್ನು ಕಳುಹಿಸಿದ್ದಾರೆ ಎಂಬುದಾಗಿ ಹೇಳಿರುವುದು ಸುಳ್ಳು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...