Thursday, October 8, 2026
Thursday, October 8, 2026

BS Yediyurappa ದೋಸ್ತಿಗೇನೂ ಬಾಧಕವಿಲ್ಲ. ಮುಂದುವರೆಯುತ್ತೇವೆ- ಬಿ.ಎಸ್.ಯಡಿಯೂರಪ್ಪ

Date:

BS Yediyurappa ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

BS Yediyurappa ಲೋಕಸಭಾ‌ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...