Prajwal Revanna ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್ ವೈರಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಸೇರಿದಂತೆ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಎಂಬ ಇಬ್ಬರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಬ್ಬರನ್ನೂ ನಿನ್ನೆ ಮಧ್ಯರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರೀತಂಗೌಡ ಜೊತೆ ಚೇತನ್ ಹಾಗೂ ಲಿಖಿತ್ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ಪ್ರೀತಂ ಗೌಡ ಕಚೇರಿಯ ಸಿಬ್ಬಂದಿ ಹಾಗೂ ಅವರ ಆಪ್ತ ನಿಖಿತ್ ಎನ್ನಲಾಗಿದೆ.
Prajwal Revanna ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಲಿಖಿತ್ ಎಂಬಾತ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ
Prajwal Revanna ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಶಾಸಕ ಪ್ರೀತಂಗೌಡ ಆಪ್ತನ ಬಂಧನ
Date: