Sunday, February 1, 2026
Sunday, February 1, 2026

Death News ಸಾಲ ವಸೂಲಿಗಾರರ ಗಲಾಟೆ ಸಹಿಸದೇ ಸಾಲ ಪಡೆದ ಮಹಿಳೆ ಆತ್ಮಹತ್ಯೆ

Date:

Death News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ.
ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು.

ಬ್ಯಾಂಕ್‌ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್‌ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಠಿತವಾಗಿತ್ತು. ಇದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಬಡ್ಡಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರು.

Death News ಮನನೊಂದಿದ್ದ ಶೋಭಾ ಅವರು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ರಂಗನಾಥ್‌ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಶೋಭಾ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಕೂಡಲೆ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆದರೆ ಶೋಭಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...