Thursday, March 19, 2026
Thursday, March 19, 2026

Mandya Ramesh ನಟನ ರಂಗಶಾಲೆಯಲ್ಲಿ ರಂಗಭೂಮಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Mandya Ramesh ನಟನ ರಂಗಶಾಲೆ, ಮೈಸೂರು ರಂಗಭೂಮಿ ಡಿಪ್ಲಮೋ ತರಗತಿಗಳಿಗೆ ಅರ್ಜಿ ಆಹ್ವಾನ ಮೇ. 19ರಂದು ನೇರ ಸಂದರ್ಶನ
ಮೈಸೂರು ಪ್ರಸಿದ್ಧ ರಂಗ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ಮೈಸೂರಿನ ನಟನ ರಂಗ ಶಾಲೆಯ ರಂಗಭೂಮಿ ಡಿಪ್ಲೊಮಾ 2024-25 (ಒಂದು ವರ್ಷದ ಅಭಿನಯ ಮತ್ತು ರಂಗತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಮೇ. 19ರಂದು ನಡೆಯಲಿದೆ.
ನಟನ ರಂಗಶಾಲೆಯು ತನ್ನ ಚಟುವಟಿಕೆಯ ಭಾಗವಾಗಿ 16 ರಿಂದ 32ವರ್ಷದ ಒಳಗಿನ ಆಸಕ್ತ ಯುವಕ-ಯುವತಿಯರಿಗೆ ಒಂದು ವರ್ಷದ ವಸತಿ ರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್ನ್ನು ನಡೆಸುತ್ತಿದ್ದು, ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ, ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ರೀತಿಯಾಗಿ ತರಬೇತಿ ಪಡೆದ ಸುಮಾರು 500ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವುದು ಗಮನಾರ್ಹ.
ಪ್ರಸ್ತುತ 2024-25ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ (ಆಡಿಷನ್) ಮೇ. 10ರ ಭಾನುವಾದಂದು ಬೆಳಿಗ್ಗೆ 10.00 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ.
ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಂದು ಸಂದರ್ಶನದಲ್ಲಿ ಭಾಗವಹಿಸಬಹುದು. ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ ಅಥವಾ ಕಛೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ, ಅರ್ಜಿ ಪಡೆದು, ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸಬಹುದು. ಆಡಿಷನ್ ಮತ್ತು ಪ್ರವೇಶಾತಿಕುರಿತ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಗಳು ವೆಬ್‌ಸೈಟ್‌ಅಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505 ಸಂಪರ್ಕಿಸುವAತೆ ಮಂಡ್ಯ ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಬಾಕ್ಸ್
Mandya Ramesh ಪ್ರತಿದಿನ ಸಂಜೆ 5.30ರಿಂದ 9ರವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...