Monday, September 21, 2026
Monday, September 21, 2026

Delhi Fire Accident ನವದೆಹಲಿ ಆದಾಯ‌ ತೆರಿಗೆ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ, ಅಧಿಕಾರಿ ಸಾವು

Date:

Delhi Fire Accident ದೆಹಲಿಯ ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಕಚೇರಿಯ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ 46 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಐಟಿಒ ಪ್ರದೇಶದ ಸಿಆರ್ ಬಿಲ್ಡಿಂಗ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಇಂದು ಮಧ್ಯಾಹ್ನ ಪಿಸಿಆರ್ ಕರೆ ಬಂದಿತ್ತು.

Delhi Fire Accident “ತಕ್ಷಣ ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ಹತೋಟಿಗೆ ತರಲಾಯಿತು ಮತ್ತು ಒಟ್ಟು ಏಳು ಜನರನ್ನು ಅಲ್ಲಿಂದ ರಕ್ಷಿಸಲಾಯಿತು. 46 ವರ್ಷದ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಕಚೇರಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರಂತೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...