Friday, March 20, 2026
Friday, March 20, 2026

Department Of Empowerment Of Senior Citizens ವಿಶೇಷ ವಿಕಲಚೇತನ‌ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೌಶಲ್ಯಾಭಿವೃದ್ಧಿ ತರಬೇತಿ

Date:

Department Of Empowerment Of Senior Citizens ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ ವಿಶೇಷ ವಿಕಲಚೇತನ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, 18 ರಿಂದ 40 ವರ್ಷದೊಳಗಿನ ಆಸಕ್ತ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.

ಕಂಪ್ಯೂಟರ್ ತರಬೇತಿ, ಮೊಬೈಲ್ ರಿಪೇರಿ, ತೋಟಗಾರಿಕೆ, ನರ್ಸರಿ, ಬಿಸಿನೆಸ್ ಪ್ರೋಸೆಸ್ ಔಟ್‍ಸೋರ್ಸಿಂಗ್, ಬ್ಯೂಟೀಷಿಯನ್, ಟೈಲರಿಂಗ್, ಹೈನುಗಾರಿಕೆ, ಹೋಂ ನರ್ಸಿಂಗ್ ಹಾಗು ಹೋಂ ಅಪ್ಲೈಯನ್ಸ್‍ಸ್ ರಿಪೇರ್ ಗಳ ತರಬೇತಿಯನ್ನು ನೀಡಲಾಗುತ್ತಿದ್ದು, ಒಬ್ಬರು 2 ವಿಷಯಗಳನ್ನು ಮಾತ್ರ ಅಯ್ಕೆ ಮಾಡಿಕೊಳ್ಳುವುದು. ತರಬೇತಿ ಅವಧಿಯಲ್ಲಿ ಊಟ, ವಸತಿಯನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತಿ ಹೊಂದಿರುವ ನಿರುದ್ಯೋಗಿ ವಿಕಲಚೇತನರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ರವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮೇ – 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Department Of Empowerment Of Senior Citizens ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ಎಂ.ಆರ್.ಡಬ್ಲ್ಯೂಗಳ ದೂ.ಸಂ.: ಶಿವಮೊಗ್ಗ -9980150110, ಭದ್ರಾವತಿ-7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247757, ಸೊರಬ-9110493122, ಹೊಸನಗರ-9731922693 ಗಳನ್ನು ಹಾಗೂ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ ಶಶಿರೇಖಾ ದೂ.ಸಂ.9449396308/ 08182-295234/251676 ಗಳನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...