Thursday, March 19, 2026
Thursday, March 19, 2026

Shimoga District Social Welfare Department ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿಜ್ಞಾನ ಪಿಯು ಕಾಲೇಜುಗಳಿಗೆ ಪ್ರವೇಶಾತಿ

Date:

Shimoga District Social Welfare Department ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ (ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿ.ಎಸ್.) ತರಗತಿಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಎಸ್‌ಎಟಿಎಸ್ ನಂ., ಆಧಾರ್ ಕಾರ್ಡ್ ನಕಲು ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಾಸ್‌ಪೋರ್ಟ್ ಸೈಜ್ ಫೋಟೋಗಳ ೨ ಪ್ರತಿಗಳು ಹಾಗೂ ಮೀಸಲಾತಿ ಪ್ರಮಾಣ ಪತ್ರಗಳೊಂದಿಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ದಿ: ೨೦/೦೫/೨೦೨೩ ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲೂಕು ಗಾಜನೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪ.ಪೂ.ಕಾಲೇಜ್, ಪ್ರಾಂಶುಪಾಲರು Shimoga District Social Welfare Department ೮೧೫೧೦೬೩೨೨೧. ಶಿಕಾರಿಪುರ ತಾಲೂಕು ಹೊಸೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪ.ಪೂ.ಕಾಲೇಜಿನ ಪ್ರಾಂಶುಪಾಲರು – ೮೯೭೧೭೦೧೯೫೮, ಸಾಗರ ತಾಲೂಕು ಆವಿನಹಳ್ಳಿ, ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪ.ಪೂ.ಕಾಲೇಜಿನ ಪ್ರಾಂಶುಪಾಲರು- ೯೪೮೦೭೬೭೧೬೪/೬೩೬೩೧೮೪೬೮೩ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ- ೦೮೧೮೨-೨೪೯೨೪೧ ಇವರುಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...