Bangalore Police ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು.
ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಪಿಯುಸಿ ವಿದ್ಯಾರ್ಥಿನಿ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
Bangalore Police ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಘಟನೆಯ ಎಲ್ಲಾ ಆಯಾಮಗಳನ್ನು ಒಳಗೊಂಡ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು