Wednesday, May 6, 2026
Wednesday, May 6, 2026

Karnataka Lokayukta Police Division ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

Date:

Karnataka Lokayukta Police Division ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಮೇ- 20 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಮಧ್ಯಾಹ್ನ 3.00 ರಿಂದ 4.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಮೇ-21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಮಧ್ಯಾಹ್ನ 3.00 ರಿಂದ 4.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣದಲ್ಲಿ, ಮೇ-22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 4.30ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ. ಮೇ-24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
Karnataka Lokayukta Police Division ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...