Tuesday, February 3, 2026
Tuesday, February 3, 2026

Rashmika Mandanna ಅಭಿವೃದ್ಧಿಗೆ ಮೆಚ್ಚುಗೆ ಸೂಚಿಸಿದ ನಟಿ ರಶ್ಮಿಕಾ ಅವರಿಗೆ ಅಂಜಲಿ ನಿಂಬಾಳ್ಕರ್ ಚುಚ್ಚು ಮಾತು

Date:

Rashmika Mandanna ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ರಶ್ಮಿಕಾ ಮಂದಣ್ಣ ಟ್ವೀಟ್ ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದ ನಟಿ ರಶ್ಮಿಕಾ ವಿರುದ್ಧ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿ ಕಾರಿದ್ದಾರೆ.

ಬುಲೆಟ್ ರೈಲಿನ ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿರುವ ಅಂಜಲಿ ನಿಂಬಾಳ್ಕರ್ , ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.
ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ.

Rashmika Mandanna ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...