Monday, October 7, 2024
Monday, October 7, 2024

DC Shivamogga ಜಿಲ್ಲೆಯಲ್ಲಿ ಸರ್ಕಾರದ ಅನುಮತಿಯಿಲ್ಲದೇ ಕೆರೆ ಹೂಳು & ಮಣ್ಣನ್ನ ತೆಗೆಯುವಂತಿಲ್ಲ- ಗುರುದತ್ತ ಹೆಗಡೆ

Date:

DC Shivamogga ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ  ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ,  ಗ್ರಾಮ ಪಂಚಾಯತ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು.

ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು ಪಟ್ಟಿ ತಯಾರಿಸಿ, ಕೆರೆಯ ಯಾವ ಭಾಗದಲ್ಲಿ ಹೂಳು/ಮಣ್ಣನ್ನು ಎತ್ತುವಳಿ ಮಾಡತಕ್ಕದ್ದು ಎಂಬ ನಕಾಶೆ ಉಳ್ಳ ವಿಸ್ತೃತ ಯೋಜನಾ ವರದಿಯೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರವಾನಿಸುತ್ತವೆ.

ಗ್ರಾಮ ಪಂಚಾಯಿತಿಯ ಪ್ರಾಧಿಕಾರ ಉಳ್ಳ ಕೆರೆಗಳಲ್ಲಿ ಹೂಳು/ಮಣ್ಣು ತೆಗೆಯಲು ಅನುಮತಿ ಕೋರಿದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಅನುಮೋದನೆ ಹಾಗೂ ಸಕ್ಷಮ ಪ್ರಾಧಿಕಾರಿಗಳಿಂದ ಡಿ.ಪಿ.ಆರ್.‌ ತಯಾರಿಸಿಕೊಂಡು ಪ್ರಸ್ತಾವನೆಯನ್ನು ಗಣಿ, ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಬೇಕು.

DC Shivamogga ಸೂಕ್ತ ತೀರುವಳಿಗಳು ಹಾಗೂ ದಾಖಲಾತಿಗಳೊಂದಿಗೆ ಸ್ವೀಕೃತಗೊಂಡ ಪ್ರಸ್ತಾವನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರಿಶೀಲಿಸಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994, ತಿದ್ದುಪಡಿ ನಿಯಮಗಳು 2023 ರಂತೆ ಸರ್ಕಾರಕ್ಕೆ ಪಾವತಿಸಬೇಕಾದ ರಾಜಧನ ಮತ್ತು ಇನ್ನಿತರೆ ಶುಲ್ಕಗಳನ್ನು ನಿಗಧಿಪಡಿಸಿ, ಕಾರ್ಯಾದೇಶ ನೀಡಿ, ಕಾರ್ಯಾದೇಶವನ್ನು ಐ.ಎಲ್.ಎಂ.ಎಸ್.‌ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಣ್ಣು ಸಾಗಾಣಿಕೆ ಮಾಡಲು ಖನಿಜ ಸಾಗಾಣಿಕೆ ಪರವಾನಿಗೆ ವಿತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹೂಳು ಮತ್ತು ಮಣ್ಣು ತೆಗೆಯಲು ಈ ವಿಧಾನವನ್ನು ಕ್ರಮಬದ್ಧವಾಗಿ ಪಾಲನೆ ಮಾಡದೇ, ನಿಯಮಾನುಸಾರ ಕಾರ್ಯಾದೇಶ ಪಡೆಯದೇ, ಜಿಲ್ಲೆಯಾದ್ಯಂತ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ನಿಯಮಾನುಸಾರ ಹಾಗೂ ಕ್ರಮಬದ್ಧವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕಾರ್ಯಾನುಮತಿ ಪಡೆದು ಕೆರೆಗಳಲ್ಲಿ ಹೂಳು/ಮಣ್ಣು ಎತ್ತುವಳಿ ಕೈಗೊಳ್ಳುವಂತೆ, ತಪ್ಪಿದಲ್ಲಿ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಹಾಗೂ ಸಾಗಾಣಿಕೆಯಲ್ಲಿ ತೊಡಗಿರುವ ವಾಹನಗಳನ್ನು ಜಪ್ತಿ ಮಾಡಿ ದಂಡ ಸಹಿತವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೆರೆ ಪ್ರಾಧಿಕಾರಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಕಾರ್ಯಪ್ಪ, ಹಿರಿಯ ಭೂ ವಿಜ್ಞಾನಿ ನವೀನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Legal Services Authority ಮಹಿಳೆ & ಮಕ್ಕಳ ಕಾನೂನುಗಳ ಸದುಪಯೋಗ ಆಗಬೇಕು- ನ್ಯಾ.ಮಂಜುನಾಥ ನಾಯಕ್

Legal Services Authority ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ...

JCI Shivamogga ಜೆಸಿಐ ಇಂಡಿಯಾ ವಲಯ- 24 ರ ಅಧ್ಯಕ್ಷರಾಗಿ ಗೌರೀಶ್ ಭಾರ್ಗವ ಆಯ್ಕೆ

JCI Shivamogga ಜೆಸಿಐ ಇಂಡಿಯಾ ವಲಯ -24 ಅಧ್ಯಕ್ಷರಾಗಿ ಶ್ರೀ...

Kittur Rani Chennamma ಕಿತ್ತೂರು ಉತ್ಸವ ಯಶಸ್ವಯಾಗಿ ನೆರವೇರಲಿ- ಎಸ್.ಎನ್.ಚನ್ನಬಸಪ್ಪ

Kittur Rani Chennamma ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ...