Thursday, March 19, 2026
Thursday, March 19, 2026

CM Siddharamaiah ಮುಂದಿನ ಶೈಕ್ಷಣಿಕ ವರ್ಷದಿಂದ ಹತ್ತನೇ ತರಗತಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಇಲ್ಲ- ಸೀಎಂ ಖಡಕ್ ಸೂಚನೆ

Date:

CM Siddharamaiah ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, ಈ ವರ್ಷ ಗ್ರೇಸ್ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ.

ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು.

CM Siddharamaiah ಶಿವಕುಮಾರ್ ಮಾತಿಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.
ಮೇ 9ರಂದು ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...