Friday, March 20, 2026
Friday, March 20, 2026

Kundli-Manesar-Palwal Expressway ಬಸ್ ನಲ್ಲಿ ಆಕಸ್ಮಿಕ ಬೆಂಕಿ ಎಂಟು ಮಂದಿ ಸಜೀವ ದಹನ

Date:

Kundli-Manesar-Palwal Expressway ಕುಂಡ್ಲಿ- ಮಾನೇಸರ್- ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ತಡರಾತ್ರಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅವಘಡದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಸಜೀವ ದಹನವಾಗಿದ್ದಾರೆ. 24ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರು ಚಂಡೀಗಢ ಮತ್ತು ಪಂಜಾಬ್ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಇವರೆಲ್ಲರೂ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದವರು. ಬಸ್ಸಿನಲ್ಲಿ ಸುಮಾರು 60 ಜನ ಪ್ರಯಾಣಿಕರು ಇದ್ದರು. ಅವರಲ್ಲಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದರು. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಕೆಲವೇ ಹೊತ್ತಿನಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ನುಹ್ ಜಿಲ್ಲೆಯ ತವಾಡು ಪಟ್ಟಣದ ಸಮೀಪವಿರುವ ಕುಂಡ್ಲಿ- ಮಾನೇಸರ್- ಪಲ್ವಾಲ್ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಟೂರಿಸ್ಟ್ ಬಸ್ ಬಾಡಿಗೆ ಪಡೆದಿದ್ದೆವು.

Kundli-Manesar-Palwal Expressway ಬನಾರಸ್, ಮಥುರಾ, ವೃಂದಾವನ ದರ್ಶನ ಪಡೆದು ವಾಪಸ್ ಮರಳುತಿದ್ದೆವು. ಈ ಬಸ್ನಲ್ಲಿ ಒಟ್ಟು 60 ಮಂದಿ ಇದ್ದೆವು. ಇವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಇದ್ದಾರೆ. ನಾವೆಲ್ಲರೂ ಹತ್ತಿರದ ಸಂಬಂಧಿಗಳು. ಪಂಜಾಬ್‌ನ ಲೂಧಿಯಾನ, ಹೋಶಿಯಾಪುರ ಮತ್ತು ಚಂಡೀಗಢ ನಿವಾಸಿಗಳು. ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ, ತಡರಾತ್ರಿ ಬಸ್ಸಿನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಇದು ಚಾಲಕನಿಗೆ ಗಮನಕ್ಕೆ ಬರಲಿಲ್ಲ ಎಂದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸರೋಜ ಎಂಬುವು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...