Government of Karnataka ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.
ಗರ್ಭಿಣಿಯ ಪತಿ, ಅವರ ಸಂಬಂಧಿಕರು ಹಾಗೂ ಯಾವುದೇ ವ್ಯಕ್ತಿಯು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅಂತಹವರು ಈ ಕಾಯ್ದೆಯ ಕಾನೂನಿನಡಿಯಲ್ಲಿ ಶಿಕ್ಷಾರ್ಹರು.
ಸಂಬಂಧಿಕರು / ದಲ್ಲಾಳಿಗಳು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಮೊದಲ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ₹50,000 ದವರೆಗೆ ದಂಡ ವಿಧಿಸಲಾಗುವುದು.
Government of Karnataka ನಂತರದ ಅಪರಾಧಕ್ಕೆ 5 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ₹1,00,000 ದವರೆಗೆ ದಂಡ ವಿಧಿಸಲಾಗುವುದು.