Sunday, December 7, 2025
Sunday, December 7, 2025

Alva’s Education Foundation ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಉದ್ಯೋಗ ಮೇಳ

Date:

Alva’s Education Foundation ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಜೂನ್.07 ಹಾಗೂ 08 ರಂದು ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆಳ್ವಾಸ್ ಕಾಲೇಜಿನ ಪ್ರೊ. ಪ್ರಸಾದ್ ಶೆಟ್ಟಿ, ಈ ಬಾರಿಯ ಮೇಳ ೧೪ನೇ ಆವೃತ್ತಿಯದ್ದಾಗಿದೆ. ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಟರಿಂಗ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ ಎಂದರು.
Alva’s Education Foundation ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ, ವಾಣಿಜ್ಯ ಹಾಗೂ ನಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಇಂಜಿನಿಯರಿಂಗ್, ಕಲಾ, ಪ್ರತಿಭಾವಂತರಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಎಸ್ ಎಸ್ ಎಲ್ ಸಿ ಹಾಗೂ ಇತರ ಅರ್ಹ ವಿದ್ಯಾರ್ಥಿಗಳಿಗೂ ಉದ್ಯೋಗಾವಕಾಶವಿದೆ. ಉದ್ಯೋಗ ಮೇಳದಲ್ಲಿ ಈವರೆಗೆ ೭೦ ಕಂಪನಿಗಳು ನೋಂದಾಯಿಸಿಕೊಂಡಿದ್ದು ಇನ್ನೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ ೧೩೦ ಕಂಪನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು ೨೦೦ಕ್ಕೂ ಕಂಪನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...