Wednesday, September 16, 2026
Wednesday, September 16, 2026

Prajwal Revanna ಆಗ ಫ್ರಾನ್ಸ್, ಈಗ ಜರ್ಮನಿ ಮತ್ತೆ ಲಂಡನ್ ಗೆ ಹಾರಿ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ

Date:

Prajwal Ravenna ಅಶ್ಲೀಲ‌ ಪೆನ್‌ಡ್ರೈವ್ ವ್ಯಾಪಕವಾಗಿ ಹರಡಿದ ಬಳಿಕ, ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ದ ಬೆನ್ನಿಗೇ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹೋಗಿದ್ದು, ಇಲ್ಲಿಯವರೆಗೂ ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್​ ರೇವಣ್ಣ ಜರ್ಮನಿಯಿಂದಲೂ ಕಾಲ್ಕಿತ್ತಿದ್ದು, ಲಂಡನ್​ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆಯೆಂದು ವರದಿಯಾಗಿದೆ.
ಇಂಗ್ಲೆಂಡ್​ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಪ್ರಜ್ವಲ್​ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್‌ಗೆ ಹೋಗಿರುವ ಬಗ್ಗೆ ಮಾಧ್ಯಮವೊಂದು ಮಾಹಿತಿ ಸಿಕ್ಕಿದೆ ಎಂದು ವರದಿ ಮಾಡಿದೆ.
ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತ ಪ್ರಜ್ವಲ್​ ರೇವಣ್ಣ ಅವರ ಜೊತೆ ಇದ್ದಾರೆ. ಮೂರು ಮಂದಿ ಒಟ್ಟಿಗೆ ಲಂಡನ್​ಗೆ ಹೋಗಿರುವ ಸಾಧ್ಯೆತೆ ಇದೆ. ಪ್ರಜ್ವಲ್​ ರೇವಣ್ಣ ಕೆಳದ 15 ದಿನಗಳಿಂದ ಕುಟುಂಬದ ಸಂಪರ್ಕದಲ್ಲಿಲ್ಲ ಎಂದೂ ಹೇಳಲಾಗಿದೆ.

2 ಬಾರಿ ವಿಮಾನ ಟಿಕೆಟ್​ ಕ್ಯಾನ್ಸಲ್​

Prajwal Ravenna ಪ್ರಜ್ವಲ್​ ರೇವಣ್ಣ ಈಗಾಗಲೇ 2 ಬಾರಿ ಭಾರತಕ್ಕೆ ಹಿಂದಿರುಗಲು ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...