CM Siddharamaih ಕಳೆದ ವರ್ಷ 2023, ಮೇ ತಿಂಗಳ ಸಮಯ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಅಂತರಗಳಿಂದ ಬಹುಮತಗಳಿಂದ ಗೆದ್ದು ಸರ್ಕಾರ ರಚಿಸಿತ್ತು. ನಂತರ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದು ದೆಹಲಿ ಹೈಕಮಾಂಡ್ ಅಂಗಳದಲ್ಲಿ ಹಲವು ಸುತ್ತಿನ ಮಾತುಕತೆ, ಚರ್ಚೆ ನಂತರ ಮೇ 20ರಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಕಾಂಗ್ರೆಸ್ ಸರ್ಕಾರಕ್ಕೆ 1 ವರ್ಷ: ಮೇ 20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಕಳೆದೊಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಏನೇನು ಕೆಲಸ ಮಾಡಿದೆ, ರಾಜ್ಯದ ಜನತೆಗೆ ಒಪ್ಪಿಗೆಯಾಗಿದೆಯೇ ಎಂದು ಗೊತ್ತಾಗಲು ಜೂನ್ 4ರ ಲೋಕಸಭೆ ಚುನಾವಣೆಯಂದು ಗೊತ್ತಾಗಲಿದೆ. ಹೀಗಾಗಿ ಈ ಲೋಕಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾಲಿಗೆ ರಾಜಕೀಯವಾಗಿ ಮಹತ್ವದ್ದಾಗಿದೆ. ಕಳೆದೊಂದು ವರ್ಷ ರಾಜ್ಯದ ಜನತೆ ಪಾಲಿಗೆ ಸ್ವಲ್ಪ ಕಹಿ ಸ್ವಲ್ಪ ಸಿಹಿ ಎನ್ನಬಹುದು, ರೈತರಿಗಂತೂ ಬರಗಾಲದಿಂದ ಕಷ್ಟವೇ ಹೆಚ್ಚಾಗಿತ್ತು
28 ಲೋಕಸಭಾ ಕ್ಷೇತ್ರಗಳ ಫಲಿತಾಂಶದಿಂದ ಮಾತ್ರ ರಾಜ್ಯ ಸರ್ಕಾರದ ಸಾಧನೆ, ಕೆಲಸವನ್ನು ಅಳೆಯುವುದು ಸರಿಯಲ್ಲ. ವಿಧಾನ ಸಭೆ ಚುನಾವಣೆಗೂ, ಲೋಕಸಭೆ ಚುನಾವಣೆಯ ಶೈಲಿ ಭಿನ್ನವಾಗಿರುತ್ತದೆ. ಆದರೆ ಸದ್ಯಕ್ಕಂತೂ ಚುನಾವಣಾ ಫಲಿತಾಂಶ ಕರ್ನಾಟಕ ರಾಜಕೀಯದ ಪಾಲಿಗೆ ಮಹತ್ವದ್ದು ಎಂದು ಅಲ್ಲಗಳೆಯಲು ಸಾಧ್ಯವಿಲ್ಲ.
ಕಾಂಗ್ರೆಸ್ ಗ್ಯಾರಂಟಿಗಳು: ಈ ಬಾರಿಯ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಭಾಗ್ಯಗಳ ಸುತ್ತವೇ ಕೇಂದ್ರೀಕೃತವಾಗಿತ್ತು. ಅಧಿಕಾಕ್ಕೆ ಬಂದ ಆರಂಭದಿಂದಲೂ ಕಾಂಗ್ರೆಸ್ ನಾಯಕರು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವತ್ತ ಪ್ರಮುಖವಾಗಿ ಗಮನ ಹರಿಸಿದ್ದರು. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಗ್ಯಾರಂಟಿ ಸುತ್ತ ಅವರ ರಾಜಕೀಯ ತಂತ್ರಗಾರಿಕೆಯಿದ್ದಿತು. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಮಾದರಿಯನ್ನು ತೋರಿಸುವುದು ಕಾಂಗ್ರೆಸ್ ನ ಉದ್ದೇಶವಾಗಿತ್ತು.
CM Siddharamaih ರಾಜಕೀಯವಾಗಿ ಹೇಳುವುದಾದರೆ, ಕಾಂಗ್ರೆಸ್ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ತಂತ್ರಗಾರಿಕೆ ಫಲ ಕೊಟ್ಟಿದೆ ಎನ್ನಬಹುದು. ಆದರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಿದೆಯೇ ಎಂಬುದು ಇಲ್ಲಿರುವ ಪ್ರಶ್ನೆ. ರಾಜ್ಯದ ಅಭಿವೃದ್ಧಿಗೆ ಕಾರ್ಯಗಳಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಗಟ್ಟು ಜನಾಂಗಗಳ ಅಬಿವೃದ್ಧಿ ಕೆಲಸಗಳಿಗೆ ಸರ್ಕಾರ ಹಣ ಒದಗಿಸಿದೆಯೇ ಎಂಬುದು ಇಲ್ಲಿ ಪ್ರಶ್ನೆಯಾಗಿದೆ. ಇಂತಹ ಗ್ಯಾರಂಟಿ ಯೋಜನೆಗಳಿಂದ ಜನತೆ ಮೇಲೆ ದೀರ್ಘಕಾಲ ಪರಿಣಾಮ ಮತ್ತು ಆರ್ಥಿಕತೆ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಬೇಕಿದೆ.
ಕಳೆದ ವರ್ಷ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ನಡುವಿನ ಅವಧಿಯಂತೆ ಕಾಣುತ್ತಿತ್ತು. ಲೋಕಸಭೆ ಚುನಾವಣೆಯಲ್ಲಿ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಸಾಧಿಸಲು ಕಾಂಗ್ರೆಸ್ ತನ್ನ ರಾಜ್ಯ ಘಟಕವನ್ನು ಸಮರ್ಥವಾಗಿ ಬಳಸಿಕೊಂಡು ಕೇಂದ್ರ ಸರ್ಕಾರವು ತೆರಿಗೆ ಮತ್ತು ಬರ ಪರಿಹಾರದ ಹಂಚಿಕೆಯಲ್ಲಿನ ಅಸಮಾನತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತರಾಟೆಗೆ ತೆಗೆದುಕೊಂಡಿತು. ಸಿಎಂ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಮತ್ತು ರಾಜ್ಯವು ಬರ ಪರಿಹಾರ ನಿಧಿಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಕೇಂದ್ರ-ರಾಜ್ಯ ಸಂಬಂಧ ಹಳಸಿತ್ತು. ಬರದಿಂದ ಕಂಗಾಲಾಗಿದ್ದ ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದೆ.