Monday, May 4, 2026
Monday, May 4, 2026

Ranganatha Swami ಭದ್ರಾವತಿ ಬಾಬಳ್ಳಿಯಲ್ಲಿ ಗಂಗಾಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ

Date:

Ranganatha Swami ಭದ್ರಾವತಿ ತಾಲೂಕಿನ ಬಾಬಳ್ಳಿಯಲ್ಲಿ ಗಂಗಾ ಪೂಜೆ ಮಾಡಲು ಹೋಗಿದ್ದವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ೫೦ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಹಲವರನ್ನ ಶಿವಮೊಗ್ಗ ಹಾಗೂ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿಯಲ್ಲಿ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಇದಕ್ಕಾಗಿ ಸಿದ್ದತೆ ಮಾಡಿಕೊಳ್ಳಲಾಗುತ್ತಿತ್ತಷ್ಟೆ ಅಲ್ಲದೆ, ಪೂರ್ವ ವಿಧಿವಿಧಾನಗಳನ್ನು ನಡೆಸಲಾಗುತ್ತಿತ್ತು.
Ranganatha Swami ಅದರಂತೆ ಬಾಬಳ್ಳಿಯ ನಿವಾಸಿಗಳು ಗಂಗೆ ಪೂಜೆ ಮಾಡಲು ಹೊರಟಿದ್ದರು. ಈ ವೇಳೆ ಅಲ್ಲಿಯೇ ಪೊದೆಯೊಂದರಲ್ಲಿ ಕಟ್ಟಿದ್ದ ಹೆಜ್ಜೇನುಗಳು ಮೇಲಕ್ಕೆದ್ದು ಗಂಗೆಪೂಜೆಯಲ್ಲಿದ್ದವರ ಮೇಲೆ ದಾಳಿ ಮಾಡಿವೆ.
ವಿಶೇಷ ಅಂದರೆ, ಹೆಜ್ಜೇನುಗಳ ದಾಳಿಯಲ್ಲಿ ಎರಡು ವರ್ಷದ ಮಗು ಸಹ ಸಿಲುಕಬೇಕಿತ್ತು. ಅದೃಷ್ಟಕ್ಕೆ ಬಾಲಕನೊಬ್ಬ ಮಗುವನ್ನು ಎತ್ತಿಕೊಂಡು ರಕ್ಷಣೆ ಮಾಡಿದ್ದಾನೆ. ಆತನ ಮೇಲೆ ಹೆಜ್ಜೇನು ಬಿಗಿಯಾಗಿ ದಾಳಿ ನಡೆಸಿ ಕಚ್ಚಿದರೂ ಮಗುವನ್ನು ಬಿಡದೆ ರಕ್ಷಣೆ ಮಾಡಿದ್ದಾನೆ. ಬಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...