Thursday, September 17, 2026
Thursday, September 17, 2026

H.D. Kumaraswamy 24 ಗಂಟೆಳಲ್ಲಿ ಅಪಘಾತಕ್ಕೆ ಸಿಕ್ಕಿ 51 ಮರಣ

Date:

H.D. Kumaraswamy 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿರುವ ಸುದ್ದಿ ಓದಿ ನನಗೆ ಬಹಳ ಆಘಾತವಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಷಾದದಿಂದ ಹೇಳಿದ್ದಾರೆ.

ರಸ್ತೆ ಸುರಕ್ಷತೆ ಬಗ್ಗೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು.

ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ ನಿಮಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಕೂಡ ಈ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು.

H.D. Kumaraswamy ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ.
ಅತಿವೇಗಕ್ಕಿಂತ
ಜೀವ ಅಮೂಲ್ಯ.
ಎಂದು ಕುಮಾರಸ್ವಾಮಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...