Department of Education ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಬಂದ ಮೇಲೆ ೧೩ ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 12 ಸಾವಿರ ಮಂದಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳು ಹಾಗೂ ಸರಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ನೀತಿಸಂಹಿತೆ ಕೊನೆಗೊಂಡ ಬಳಿಕ ಪ್ರಕ್ರಿಯೆ ಆರಂಭಿಸಲಾಗುವುದು. ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದರು.
ಹಿಂದಿನ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ್ದ ಕೊಳಕನ್ನು ತೊಳೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾ ಅವರ ಇಡೀ ಅವಧಿಯಲ್ಲಿ ಕೇವಲ 3300 ಶಿಕ್ಷಕರನ್ನು ನೇಮಕ ಮಾಡಲಾಗಿತ್ತು.
Department of Education ಈಗ ಆಧಾರರಹಿತ ಆರೋಪ ಮಾಡುತಿದ್ದಾರೆ. 3000 ಕೆಪಿಎಸ್ ಶಾಲೆ ಆರಂಭಕ್ಕೆ ಸರಕಾರ ಬದ್ಧವಾಗಿದೆ. ರಾಜ್ಯದ 600 ಶಾಲೆಗಳ ದುರಸ್ತಿಗೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಟ್ಟಡ ದುರಸ್ತಿಗೂ ಆದ್ಯತೆ ನೀಡಲಾಗುವುದು. ನಾಳೆಯಿಂದ ಶಾಲೆಗಳು ಆರಂಭವಾಗಲಿದ್ದು, ಎಲ್ಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಮೊದಲ ವಾರದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.