Harish Poonja ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಹರೀಶ್ ಪುಂಜಾ ವಿರುದ್ಧ ದಾಖಲಾಗಿದ್ದ 2 FIRಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು.
ಅದು ಬಿಟ್ಟು ಜನಪ್ರತಿನಿಧಿ ಎಂಬ ಕಾರಣಕ್ಕೆ ಪೋಲಿಸ್ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.
Harish Poonja ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ನ್ಯಾಯಾಲಯ ಸಲಹೆ ನೀಡಿದೆ.
ಹಾಗೆಯೇ ಪ್ರಸಕ್ತ ದಿನಗಳಲ್ಲಿ ಪೊಲೀಸ್ ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಿದೇಶ ನ್ಯಾಯಾಲಯಗಳಲ್ಲಿ ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಡಿಸಿದೆ.
ವಾದ ಆಲಿಸಿದ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಮಾಧಾನವಾಗಿರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.