Friday, October 4, 2024
Friday, October 4, 2024

World Environment Day ಪರಿಸರ ಕಾಪಾಡಿ ಮುಂದಿನ ಪೀಳಿಗೆಗೆ ವರ್ಗಾಯಿಸುವ ಹೊಣೆ ನಮ್ಮೆಲ್ಲರದು- ಬಿ.ಹೆಚ್.ಕೃಷ್ಣಪ್ಪ

Date:

World Environment Day ಮಾನವರಿಗೆ ಹೇಗೆ ಜೀವಿಸುವ ಹಕ್ಕಿದಿಯೋ ಹಾಗೆಯೇ ಮರ-ಗಿಡಗಳಿಗೂ ಜೀವಿಸುವ ಹಕ್ಕಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಿ ಹೆಚ್ ಕೃಷ್ಣಪ್ಪ ನುಡಿದರು.
ಜೂ.5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ ರಕ್ಷಿಸುವುದು ಸಮಾಜದ ಪ್ರತಿ ನಾಗರೀಕನ ಜವಾಬ್ದಾರಿಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳಾದ ನೆಲ, ಜಲ, ವಾಯುವನ್ನು ಶುದ್ಧವಾಗಿ ಸೇವಿಸುವ, ಸಂಸ್ಕರಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ನಮ್ಮಗಳ ಮೇಲಿದೆ. ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರದೇ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ಮಾನವನ ಕರ್ತವ್ಯ ಕೂಡ ಆಗಿದೆ.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋ ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಜನತೆ ತಮ್ಮ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ. ಇದರ ಬದಲಾಗಿ ಪ್ರತಿಯೊಬ್ಬರೂ ತಮ್ಮ ಹುಟ್ಟಿದ ದಿನದ ಪ್ರಯುಕ್ತವಾಗಿ ಒಂದೊಂದು ಗಿಡವನ್ನು ನೆಡುವುದರ ಮೂಲಕ ಆಚರಿಸಿದರೆ ಅರ್ಥಪೂರ್ಣವಾಗುತ್ತದೆ. ಅರಣ್ಯ ಇಲಾಖೆಯ ಕಾಯ್ದೆ ಪ್ರಕಾರ ಭಾರತದ ಭೂಪ್ರದೇಶಕ್ಕೆ ಶೇಕಡಾ 33 ರಷ್ಟು ಅರಣ್ಯದ ಅವಶ್ಯಕತೆ ಇದೆ. ಆದರೆ ಒಂದು ವರದಿಯ ಪ್ರಕಾರ 21% ಮಾತ್ರ ಇರುವುದು ಖೇದಕರ. ಕಾಡನ್ನು ಉಳಿಸಿ ನಾಡನ್ನು ಬೆಳೆಸಿ ಎಂಬ ಘೋಷವಾಕ್ಯದ ಬದಲಾಗಿ ಕಾಡನ್ನು ಬೆಳೆಸಿ ಪ್ರಾಣವನ್ನು ಉಳಿಸಿ ಎಂಬ ಸ್ಥಿತಿಗೆ ತಲುಪಿದ್ದೇವೆ. ಹಾಗಾಗಿ ಪರಿಸರ ದಿನಾಚರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗದೆ ವರ್ಷಪೂರ್ತಿ ಆಚರಣೆ ಆಗಲಿ ಎಂದು ಆಶಿಸಿದರು.
World Environment Day ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಮಾತನಾಡಿ, ಪರಿಸರ ಎಂದರೆ ಕೇವಲ ಮರ ಗಿಡಗಳನ್ನು ಬೆಳೆಸುವುದು ಮಾತ್ರವಲ್ಲ ಇದರೊಂದಿಗೆ ತನ್ನ ಸುತ್ತಮುತ್ತಲಿನ ಪರಿಸರ, ಮನೆ ಕಛೇರಿ ತಾನು ವಾಸಿಸುತ್ತಿರುವ ಸ್ಥಳದ ಸುತ್ತಮುತ್ತ ಸ್ವಚ್ಚವಾಗಿಟ್ಟುಕೊಳ್ಳುವುದು. ಜಲ, ನೆಲ ವಾಯುವನ್ನು ಮಿತವಾಗಿ ಬಳಸುವುದು. ಅನಾವಶ್ಯಕವಾಗಿ ವಾಹನಗಳನ್ನು ಚಲಾಯಿಸದಿರುವುದು ಹಾಗೂ ತನ್ನ ನಡವಳಿಕೆಯಲ್ಲಿ ಕೂಡ ಅದನ್ನು ಶಾಶ್ವತವಾಗಿ ಅಳವಡಿಸಿಕೊಳ್ಳುವುದರ ಮೂಲಕ ಪರಿಸರವನ್ನು ಸಂರಕ್ಷಿಸಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಅಧೀನ ಕಚೇರಿಗಳ ಸಿಬ್ಬಂದಿ ವರ್ಗದವರು ಭಾಗವಹಿಸಿ ಗಿಡ ನೀಡುವುದರ ಮೂಲಕ ಸಂಭ್ರಮದಿಂದ ಪರಿಸರ ದಿನಾಚರಣೆಯನ್ನು ಆಚರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...