Monday, April 13, 2026
Monday, April 13, 2026

Ramalinga Reddy ಶಕ್ತಿ ಯೋಜನೆ ಯಾವ ಕಾರಣಕ್ಕೂ ನಿಲ್ಲಿಸಲ್ಲ- ಸಚಿವ ರಾಮಲಿಂಗಾರೆಡ್ಡಿ

Date:

Ramalinga Reddy ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ. ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಮೈಸೂರು-ಕೊಡಗು ಲೋಕಸಭಾ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ್‌ ಅವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ. ಮೋದಿಯವರ ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಸಹಾಯವಾಗಲು, ಬಡ ಹಾಗೂ ಮಧ್ಯಮ ವರ್ಗದವರಿಗೆ ಸಹಾಯವಾಗಲು ಗ್ಯಾರಂಟಿ ತಂದಿದ್ದೇವೆ. ಗ್ಯಾರಂಟಿಗೂ ಮತಕ್ಕೂ ಸಂಬಂಧವಿಲ್ಲ. ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಬಜೆಟ್‌ನಲ್ಲಿ‌ 5,500 ಕೋಟಿಯನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.

Ramalinga Reddy ಯಾವುದೇ ಸಮಸ್ಯೆ ಇಲ್ಲ. ನಮ್ಮ ಸರ್ಕಾರ ಇರೋವರೆಗೂ ಶಕ್ತಿ ಯೋಜನೆ ಇರುತ್ತದೆ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಸ್‌ ದರ ಏರಿಕೆ ವಿಚಾರದ ಬಗ್ಗೆ ಮಾತನಾಡಿ, ಮಾದರಿ ನೀತಿ ಸಂಹಿತೆ ಇರುವುದರಿಂದ ಈ ಬಗ್ಗೆ ಚರ್ಚೆಯಾಗಿಲ್ಲ. ಬಸ್ ನಿಗಮಗಳಿಂದ ಇದುವರೆಗೂ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲ. ಇಂಧನ ಮತ್ತು ಬಿಡಿಭಾಗಗಳ ಬೆಲೆ ಹೆಚ್ಚಾಗಿದೆ. ಮೊದಲು ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿ. ನಂತರದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related