University of Agriculture and Horticulture ಮಲೆನಾಡಿನ ವಿಶಿಷ್ಟ ಹಲಸಿನ ತಳಿಗಳಾದ ಹಳದಿ ರುದ್ರಾಕ್ಷಿ-ಜೆ.ಎ.ಆರ್., ಆರೆಂಜ್-ಆರ್.ಪಿ.ಎನ್., ಕೆಂಪು ರುದ್ರಾಕ್ಷಿ-ಡಿ.ಎಸ್.ವಿ ಮತ್ತು ರೆಡ್-ಆರ್.ಟಿ.ಬಿ. ತಳಿಗಳಿಗೆ ನವದೆಹಲಿ ಭಾರತ ಸರ್ಕಾರದ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಣಿಗೊಂಡು ಮಾನ್ಯತೆ ಪಡೆದಿವೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಪ್ರೊ. ಎಂ.ಬಿ. ದುಶ್ಯಂತಕುಮಾರ್ ಹೇಳಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಳಿವಿನಂಚಿನಲ್ಲಿರುವ ಅಪರೂಪದ ಹಲಸಿನ ತಳಿಗಳನ್ನು ಸಂರಕ್ಷಿಸಿ, ಬೆಳೆಸುವ ಹಾಗೂ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿರುವುದನ್ನು ಮನಗಂಡು ಈ ನಾಲ್ಕು ತಳಿಗಳ ಕುರಿತು ಸುಮಾರು 3-4 ವರ್ಷಗಳಿಂದ ಸಮಗ್ರ ಅಧ್ಯಯನ ನಡೆಸಲಾಗಿದೆ
University of Agriculture and Horticulture ಸಂಪೂರ್ಣ ಮಾಹಿತಿಯನ್ನು ನವದೆಹಲಿಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರಕ್ಕೆ ಸಲ್ಲಿಸಲಾಗಿತ್ತು. ಪ್ರಾಧಿಕಾರ ದಿಂದ ನೇಮಕಗೊಂಡ ತಜ್ಞ ವಿಜ್ಞಾನಿಗಳು ೨ಬಾರಿ ಸ್ಥಳ ಪರಿ ಶೀಲನೆ ನಡೆಸಿ, ವಿವರವಾದ ಮಾಹಿತಿಯನ್ನು ಸಂಗ್ರಹಿಸಿ, ಅಂತಿಮವಾಗಿ ನೋಂದಣಿಗೆ ಅರ್ಹವೆಂದು ಶಿಫಾರಸ್ಸು ಮಾಡಿದ್ದ ಹಿನ್ನೆಲೆಯಲ್ಲಿ ನೋಂದಣಿ ಕಾರ್ಯ ಪೂರ್ಣಗೊಂಡು ಪ್ರಮಾಣಪತ್ರ ದೊರಕಿದೆ ಎಂದರು.
ಈ ಅಪರೂಪದ ಸಸ್ಯ ತಳಿಗಳನ್ನು ಪ್ರಸಕ್ತ ಸಾಲಿನಿಂದಲೇ ಅಭಿವೃದ್ಧಿಪಡಿಸಿ, ಆಸಕ್ತ ಕೃಷಿಕರಿಗೆ ತಲುಪಿಸಲು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ವಿಶೇಷ ಗಮನಹರಿಸಲಿದೆ. ಅಲ್ಲದೇ ಅಷ್ಟೇ ಮಿಡಿ ತರಹದ ಅತ್ಯಪರೂಪದ ಮಾವಿನ ವಿಶಿಷ್ಟ ತಳಿಗಳನ್ನೂ ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಿದೆ. ಅಪರೂಪದ ತಳಿ ಇವುಗಳಾಗಿದ್ದು, ಹಲಸು ಬೆಳೆಯುವ ಆಸಕ್ತ ಕೃಷಿಕರಿಂದ ಈ ಹಲಸಿನ ತಳಿ ಉಳಿ ದಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.+++