Monday, December 15, 2025
Monday, December 15, 2025

Adichunchanagiri Education Trust ವಿದ್ಯಾರ್ಥಿಗಳು ,ಶಿಕ್ಷಕರ ಮತ್ತು ಪೋಷಕರ ಮಾತನ್ನು ಪಾಲಿಸಿದಾಗ ಅವರಿಗೆ ಉತ್ತಮ ಭವಿಷ್ಯ- ಶ್ರೀಪ್ರಸನ್ನನಾಥಶ್ರೀ

Date:

Adichunchanagiri Education Trust ವಿದ್ಯಾರ್ಥಿಗಳು ಬದುಕಿನ ರಕ್ಷಣೆಯ ಬಗ್ಗೆ ಹಾಗೂ ತಮ್ಮನ್ನು ಸಾಕಿ ಸಲಹಿದ ತಂದೆ ತಾಯಿಗಳ ಬಗ್ಗೆಯೂ ಕೂಡ ಚಿಂತನೆ ನಡೆಸಬೇಕೆಂದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರಿಚಯ ಕಾರ್ಯಕ್ರಮ ಹಾಗೂ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು
ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಪೋಷಕರು ಹೇಳುವಂತಹ ಮಾತನ್ನು ಪಾಲಿಸಿದಾಗ ಉತ್ತಮ ಭವಿಷ್ಯವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು.ಓದುವಾಗ ಏಕಾಗ್ರತೆ ಹೆಚ್ಚಲು ತನಗೆ ತಾನೆ ಸಕಾರತ್ಮಾಕವಾದ ಅಂಶಗಳನ್ನು ಹೇಳಿಕೊಂಡು ಓದಲು ಕೂರುವ ಮುನ್ನ ಎಲ್ಲವನ್ನು ಬಳೆಯಲ್ಲಿರಿಸಿಕೊಂಡು ಒಂದೆಡೆ ಏಕಾಗ್ರತೆಯಿಂದ ಕೂತು ಕಲಿಯಲು ಪ್ರಯತ್ನಿಸಬೇಕು. 10 ನಿಮಿಷಗಳ ನಂತರ ಪುಸ್ತಕವನ್ನು ಮುಚ್ಚಿ ಅಲ್ಲಿಯವರೆಗೆ ಓದಿದ್ದನ್ನು ಮರುಕಳಿಸಬೇಕು.

ಪರೀಕ್ಷೆಯ ಸಮಯದಲ್ಲಾಗಲಿ ಇತರ ದಿನಗಳಲ್ಲಾಗಲಿ, ವಿದ್ಯಾರ್ಥಿ 8 ಗಂಟೆಗಳ ನಿದ್ರೆ ಅತ್ಯಾವಶ್ಯಕ, ಪರೀಕ್ಷೆಯ ಸಮಯದಲ್ಲಿ ಓದಿನ ಜೊತೆಗೆ ನಿದ್ರೆಯೂ ಇರಬೇಕು. ಪೋಷಕರು ಮಕ್ಕಳನ್ನು ವಿನಾಕಾರಣ ದೂಷಿಸುವುದಾಗಲಿ, ಮತ್ತೊಬ್ಬರೊಡನೆ ಹೋಲಿಸಿ ಶಿಕ್ಷಿಸುವುದಾಗಲಿ ಮಾಡಬಾರದು ಎಂದು ಕಿವಿಮಾತು ಹೇಳಿದರು.

Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶೈಕ್ಷಣಿಕ ಸಲಹೆಗಾರರಾದ ಶ್ರೀ ವಿಜಯವಾಮನ್ ಮಾತನಾಡುತ್ತಾ,
ತಂದೆ ತಾಯಿಗಳು ನಿಮ್ಮ ಎಲ್ಲಾ ಬೇಕು ಬೇಡಿಕೆಗಳನ್ನು ಈಡೇರಿಸುತ್ತಾರೆ. ಜೀವನದ ಸಂಧ್ಯಾ ಕಾಲದಲ್ಲಿ ನಿಮಗೆ ಬದುಕು ನೀಡಿದ ತಂದೆ ತಾಯಿಗಳ ರಕ್ಷಣೆ ಹಾಗೂ ಪೋಷಣೆ ನಿಮ್ಮ ಮೇಲಿರುತ್ತದೆ. ಅದನ್ನು ಚಾಚು ತಪ್ಪದೇ ಮಾಡುವುದು ನಿಮ್ಮ ಕರ್ತವ್ಯ ಕೂಡ ಆಗಿರುತ್ತದೆ. ಆದರೆ ಆಧುನಿಕ ಬದುಕಿನಿಂದಾಗಿ ಇಂದು ಎಷ್ಟೋ ತಂದೆ ತಾಯಿಗಳು ವೃದ್ದಾಶ್ರಮ ಸೇರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೇವಿನ ಬೀಜವನ್ನು ಬಿತ್ತಿ, ಮಾವಿನ ಫಸಲನ್ನು ನಿರೀಕ್ಷಿಸಲು ಸಾಧ್ಯವಿಲ್ಲವೋ ಅದೇ ರೀತಿ ವಿದ್ಯಾರ್ಥಿಗಳಿಗೆ ಒಳ್ಳೆಯ ಅಂಶಗಳನ್ನು ಬಿತ್ತದೇ ಅವರುಗಳನ್ನು ಒಳ್ಳೆಯವರನ್ನಾಗಿ ರೂಪಿಸುವುದು ಕೂಡ ಕಷ್ಟ ಸಾಧ್ಯ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಅಂಶಗಳನ್ನು ಒತ್ತಿ ಒತ್ತಿ ಹೇಳಬೇಕು. ಆ ಮೂಲಕ ವಿದ್ಯಾರ್ಥಿ ಸಮೂಹವನ್ನು ಉತ್ತಮ ಸತ್ಪ್ರಜೆಗಳಾಗಿ ರೂಪಸಿಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಗುರುರಾಜ್ಎಸ್. ವಿ., ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್, ಮತ್ತು ಗಣ್ಯರು ಹಾಗೂ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...