H.D.Kumarswami ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೆಯೇ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ, ಇದೀಗ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನಲೆ ಚನ್ನಪಟ್ಟಣ ಕ್ಷೇತ್ರ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
ಹೆಚ್ಡಿಕೆ ಅವರು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದು, ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಂತರ ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
H.D.Kumarswami ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಇಬ್ಬರೂ ನಾಯಕರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಬೊಮ್ಮಾಯಿ ಹಾಗೂ ಹೆಚ್ಡಿಕೆ ಅವರಿಗೆ ಖಾದರ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಉಪಸ್ಥಿತರಿದ್ದರು.