B.S. Yediyurappa ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿ-2012) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ತಡೆಯಾಜ್ಞೆ ನೀಡಿದೆ.
ಪೋಲೀಸ್ ದೂರಿನ ಪ್ರಕಾರ, ಯಡಿಯೂರಪ್ಪ ವಿರುದ್ಧ 17 ವಯಸ್ಸಿನ ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ 2012 ರ B.S. Yediyurappa ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ವರ್ಷದ ಫೆಬ್ರವರಿ ಎರಡರಂದು ಇಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದರು.
ಯಡಿಯೂರಪ್ಪ ಆರೋಪವನ್ನು ತಳ್ಳಿಹಾಕಿದ್ದು, ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿರುವವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.