D.K.Shivakumar ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬೆನ್ನಲ್ಲೇ ನಟ ದರ್ಶನ್ ಗೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗುತ್ತಲೇ ಇದ್ದು ಇದೀಗ ರಾಜರಾಜೇಶ್ವರಿ ನಗರದಲ್ಲಿರುವ ರಾಜಕಾಲುವೆ ಮೇಲೆ ನಿರ್ಮಿಸಲಾಗಿರುವ ನಿವಾಸದ ವಿಚಾರದಲ್ಲೂ ಸಂಕಷ್ಟ ಶುರುವಾಗಿದೆ.
ಹೌದು, ಈಗಾಗಲೇ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಅವರ ಮನೆಯನ್ನು ರಾಜಕಾಲುವೆ ಮೇಲೆ ಕಟ್ಟಲಾಗಿದೆ ಎಂಬ ಆರೋಪವಿದೆ.
ಹೀಗಾಗಿ ಈ ಮನೆಯನ್ನು ತೆರವುಗೊಳಿಸಬೇಕು ಎಂಬ ಒತ್ತಡವಿದೆ. ಆದರೆ, ದರ್ಶನ್ ಸ್ಟೇ ತಂದಿದ್ದು, ಇದನ್ನು ತೆರವು ಮಾಡಲು ಬಿಬಿಎಂಪಿ ಪ್ರಯತ್ನಿಸುತ್ತಿದೆ. ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಬಗ್ಗೆ ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಒತ್ತುವರಿ ಜಾಗವನ್ನು ತೆರವು ಮಾಡುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಅದರಲ್ಲಿ ನೀನು, ನಾನು ಎಂದು ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.
D.K.Shivakumar ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಲ್ಲಿ ರಾಜ ಕಾಲುವೆ ಮೇಲೆ ಕಟ್ಟಲಾಗಿರುವ ದರ್ಶನ್ ಅವರ ತೂಗುದೀಪ ನಿವಾಸ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಎಸ್ ಎಸ್ ಆಸ್ಪತ್ರೆ ಸೇರಿಂದತೆ 67 ಕಟ್ಟಡಗಳನ್ನು ಪಟ್ಟಿ ಮಾಡಲಾಗಿತ್ತು
ಇದೀಗ ದರ್ಶನ್ ಸೇರಿದಂತೆ ಹಲವರು ತಂದಿರುವ ಹೈಕೋರ್ಟ್ ಸ್ಟೇ ತೆರವುಗೊಳಿಸಲು ಸರ್ಕಾರ ಮುಂದಾಗಿದ್ದು, ಕಟ್ಟಡಗಳನ್ನು ತೆರವುಗೊಳಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ದರ್ಶನ್ ಅವರ ನಿವಾಸ ಮತ್ತು ಇತರರು ಬಫರ್ ಝೋನ್ ಅನ್ನು ಅತಿಕ್ರಮಣ ಮಾಡಿರುವುದರ ಬಗ್ಗೆ ಹೈಕೋರ್ಟ್ (ಎಚ್‌ಸಿ) ನಲ್ಲಿ ಇನ್ನೂ ತಡೆಯಾಜ್ಞೆ ಇದೆ ಎಂದು ಕಂಡುಬಂದಿದೆ. ಮುಂದಿನ ಕೆಲಸದ ದಿನದಲ್ಲಿ ಬಿಬಿಎಂಪಿ ತಡೆಯಾಜ್ಞೆ ತೆರವು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಲಿದೆ” ಎಂದು ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.