Shivamogga Government Employees Association ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ 23 ಜೂನ್ ಭಾನುವಾರದಂದು ಬೆಳಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಸರ್ವಸದಸ್ಯರ ವಾರ್ಷಿಕ ಮಹಾಸಭೆ ಮತ್ತು ನವೀಕೃತ ಸರ್ಕಾರಿ ನೌಕರರ ಭವನದ ಲೋಕಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ, ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಸಚಿವ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ನೆರವೇರಿಸಲಿದ್ದಾರೆ ಹಾಗೂ ನವೀಕೃತ ಸರ್ಕಾರಿ ನೌಕರರ ಭವನವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಲಿದ್ದಾರೆಂದು ತಿಳಿಸಿದರು
ಸರ್ಕಾರಿ ನೌಕರರ ಸಂಘವು ಪ್ರತಿವರ್ಷ ರಾಜ್ಯಾದ್ಯಂತ ಸುಮಾರು 10000 ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ನಗದು ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸುತ್ತಿದೆ. , ಇದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 2024ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90% ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ 400 ಸರ್ಕಾರಿ ನೌಕರರ ಮಕ್ಕಳನ್ನು ಗುರುತಿಸಿ ರೂ. 1000/ನಗದು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವ ನೂತನ ವಿಧಾನ ಪರಿಷತ್ ಸದಸ್ಯರು ಹಾಗೂ ನಿಗಮ-ಮಂಡಳಿ ಪ್ರಾಧಿಕಾರದ ಅಧ್ಯಕ್ಷರನ್ನು ಅಭಿನಂದಿಸಲಾಗುವುದು ಎಂದರು.
Shivamogga Government Employees Association ಶಾಸಕ ಚನ್ನಬಸಪ್ಪ ಎಸ್ ಎಲ್ ಬೋಜೇಗೌಡ, ಡಾ!! ಧನಂಜಯ ಸರ್ಜಿ, ಬಲ್ಕೀಶ ಬಾನು, , ಡಿ ಎಸ್ ಅರುಣ್, ಎಂಎಡಿಬಿ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ, ಸ್ಬುಡಾ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಜಿ ಪಲ್ಲವಿ, ಎಸ್ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ , ಸಿಇಒ ಲೋಖಂಡೆ, ಎಸ್ಪಿ.ಮಿಥುನ್ ಕುಮಾರ್ ಮೊದಲಾದವರು ಉಪಸ್ಥಿತರಿರುವರು ಎಂದರು.
Shivamogga Government Employees Association ನವೀಕೃತ ಸರ್ಕಾರಿ ನೌಕರರ ಭವನದ ಲೋಕಾರ್ಪಣೆ
Date: