Aam Aadmi Party ಮುಂಬರುವ ಜಿ.ಪಂ., ತಾ.ಪಂ., ಸೇರಿದಂತೆ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅರವಿಂದ್ ಕ್ರೇಜಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿರುವುದು ಸಂತಸ ತಂದಿದೆ. ಸತ್ಯಕ್ಕೆ ಜಯ ಸಿಕ್ಕಂತೆಯಾಗಿದೆ. ಬಿಜೆಪಿ ಸರ್ವಾಧಿಕರತನದಿಂದ ವರ್ತಿಸುತ್ತಿದ್ದು, ಭ್ರಷ್ಟಚಾರ ರಹಿತ ನಾಯಕರನ್ನು ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದೆ. ಇದೊ೦ದು ಕೆಟ್ಟ ರಾಜಕಾರಣವಾಗಿದೆ. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಚಾಟಿ ಏಟು ಬೀಸಿದೆ. ಆದರೂ ಕೂಡ ಇದನ್ನು ಮುಂದುವರಿಸಲಾಗುತ್ತಿದೆ ಎಂದರು.
ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿದ್ದಲ್ಲದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರವೇ ಕಾರಣವಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Aam Aadmi Party ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ಕೂಡ ಆಡಳಿತ ನಡೆಸುವಲ್ಲಿ ವೈಫಲ್ಯ ಖಂಡಿವೆ. ರಾಜ್ಯ ಸರ್ಕಾರ ಗ್ಯಾರಂಟಿಗಳಲ್ಲಿ ಮುಳುಗಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸಲಾಗಿದೆ. ದೆಹಲಿ ಸರ್ಕಾರ ಎಲ್ಲಾ ಗ್ಯಾರಂಟಿಗಳನ್ನು ನೀಡಿದರೂ ಕೂಡ ಯಾವುದೇ ಬೆಲೆಯನ್ನು ಏರಿಸಿಲ್ಲ. ಕರ್ನಾಟಕ ರಾಜ್ಯದಲ್ಲಿ ಏಕೆ ಈ ರೀತಿ ಆಡಳಿತ ನಡೆಸಬಾರದು ಎಂದು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮನೋಹರ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗೆಯೇ ಹೊಸ ತಂಡ ರಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನೂತನ ಜಿಲ್ಲಾಧ್ಯಕ್ಷ ಮನೋಹರ ಗೌಡ, ಪದಾಧಿಕಾರಿಗಳಾದ ಪ್ರೊ.ಚಂದ್ರಶೇಖರ್, ಕಿರಣ್ ಕೆ., ನಜೀರ್ ಅಹಮ್ಮದ್, ರಾಜು, ಲಿಂಗರಾಜು, ಹರೀಶ್, ಲಕ್ಷ್ಮೀಶ್, ಸಗೀರ್ ಅಹಮ್ಮದ್ ಮುಂತಾದವರು ಇದ್ದರು.