D.K.Shivakumar ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ಸುಕರಾಗಿದ್ದಾರೆಂಬ ಸುಳಿವು ಸಿಗುತ್ತಿದ್ದಂತೆಯೇ ಇತ್ತ ಮೈತ್ರಿ ಪಕ್ಷಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿಯೂ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆಗಳು ಆರಂಭವಾಗಿವೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತಾಡಿದ ಕೇಂದ್ರ ಸಚಿವರ ಕುಮಾರಸ್ವಾಮಿಯವರು, ಬೆಂಗಳೂರು ಗ್ರಾಮಾಂತರ ಲೋಕಸಭೆಯ ಫಲಿತಾಂಶವನ್ನು ಪುನರಾವರ್ತಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕೈಜೋಡಿಸುವುದಾಗಿ ಹೇಳಿದರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕುಮಾರಸ್ವಾಮಿಯವರ ಬಾವ ಡಾ ಸಿಎನ್ ಮಂಜುನಾಥ್ ಅವರು, ಡಿಕೆ.ಶಿವಕುಮಾರ್ ಅವರ ಕಿರಿಯ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದರು.
D.K.Shivakumar ಕುಮಾರಸ್ವಾಮಿ ಅವರು ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕ ರಾಜಕೀಯದ ಕುರಿತು ಚರ್ಚೆ ನಡೆಸಿರುವುದಾಗಿ ಹೇಳಿದ್ದು, ಉಭಯ ನಾಯಕರ ಮಾತುಕತೆ ವೇಳೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಅಮಿತ್ ಶಾ ಸೂಚಿಸುತ್ತಾರೆಯೇ ಎಂಬುದರ ಕುರಿತು ಕುತೂಹಲಗಳು ಮೂಡತೊಡಗಿದೆ.
ಡಿಕೆ.ಶಿವಕುಮಾರ್ ಅವರು ಡಿಸಿಎಂ ಆದ ಬಳಿಕ ಕಳೆದ ಒಂದೂವರೆ ವರ್ಷದಿಂದ ಅವರು ಚನ್ನಪಟ್ಟಣಕ್ಕೆ ಹೋಗಿಲ್ಲ. ಈಗ ಕ್ಷೇತ್ರದ ಬಗ್ಗೆ ಅನುಕಂಪ ತೋರುತ್ತಿದ್ದಾರೆ. ಇದುವರೆಗೂ ಚನ್ನಪಟ್ಟಣವನ್ನು ಅಭಿವೃದ್ಧಿಪಡಿಸದಂತೆ ಅವರನ್ನು ಯಾರು ತಡೆದಿದ್ದರು? ಸಂಸದರಾಗಿ ಶಿವಕುಮಾರ್ ಅವರ ಸಹೋದರನ ಕೊಡುಗೆ ಏನಿತ್ತು? ನಮ್ಮ ಕಡೆಯಿಂದ ಯಾರು ಅಭ್ಯರ್ಥಿ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆ.ಶಿವಕುಮಾರ್ ಅವರು ಸ್ಪರ್ಧಿಸಿದ್ದೇ ಆದರೆ, ಇದು ಅವರ ರಾಜಕೀಯ ಜೀವನದ ಅಂತ್ಯವಾಗಲಿದೆ ಎಂದು ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಅವರು ಹೇಳಿದ್ದು, ಈ ಮೂಲಕ ತಾವೂ ಕೂಡ ಟಿಕೆಟ್ ಆಕಾಂಕ್ಷಿ ಎಂಬುದನ್ನು ವ್ಯಕ್ತಪಡಿಸಿದ್ದಾರೆ.
D.K.Shivakumar ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ. ನಿಖಿಲ್ ಅಥವಾ ಯೋಗೇಶ್ವರ್ ಕಣಕ್ಕೆ?
Date: