Saturday, August 29, 2026
Saturday, August 29, 2026

Madhu Bangarappa ಮಲೆನಾಡಿನಲ್ಲಿ ಆನೆಹಿಂಡುಗಳ ಕಾಟದ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು- ಮಧು ಬಂಗಾರಪ್ಪ

Date:

Madhu Bangarappa ಮಲೆನಾಡು ಭಾಗದಲ್ಲಿ ಆಗಾಗ್ಗೆ ಕಂಡುಬರುವ ಆನೆಗಳ ಹಿಂಡುಗಳಿಂದಾಗಿ ಕೃಷಿಕರು ಕಷ್ಟಪಟ್ಟು ಬೆಳೆದ ಬೆಳೆ ಹಾನಿಗೊಳಗಾಗುತ್ತಿದೆ. ಅದರ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಆನೆಯ ತುಳಿತಕ್ಕೊಳಗಾದ ಕುಟುಂಬಕ್ಕೆ ಒಂದು ತಿಂಗಳೊಳಗಾಗಿ ಪರಿಹಾರಧನ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು, ಸಂಬಂಧಿಸಿದ ತಾಲೂಕುಗಳ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರ ಭರ್ತಿ ಮಾಡಲು ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸುಮಾರು 12,000 ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸುಮಾರು 15,000 ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಕಡಿಮೆ ಮಕ್ಕಳಿರುವ ಶಾಲೆಯ ಮಕ್ಕಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸಿ, ಉತ್ತಮ ಶಿಕ್ಷಣ ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ನೀಟ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 500ಕೆ.ಪಿ.ಎಸ್. ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಶಾಲೆಗಳ ಸಂಖ್ಯೆಯನ್ನು 1000ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಕೊರತೆ ಇದ್ದು, ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಜಿಲ್ಲೆಯಲ್ಲಿ ಕೊರತೆ ಇರುವ ವೈದ್ಯರ ಹುದ್ದೆಗಳ ನೇಮಕಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ನೇಮಿಸಲು ಉದ್ದೇಶಿಸಲಾಗಿದೆ. ಪಶು ಇಲಾಖೆಯಲ್ಲಿನ ವೈದ್ಯರ ಹುದ್ದೆಗಳ ನೇಮಕ್ಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಅತಿವೃಷ್ಟಿಯಿಂದ ಬಿದ್ದಿರುವ ಹಾಗೂ ಭಾಗಶಃ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ಥರಿಗೆ ಕಳೆದ 2-3 ವರ್ಷಗಳಿಂದ ಪರಿಹಾರಧನ ವಿತರಿಸದಿರುವುದು ನೋವಿನ ಸಂಗತಿ ಕೂಡಲೇ ಪರಿಹಾರಧನ ಕೊಡಿಸುವಂತೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರು ಸಚಿವರಿಗೆ ಮನವಿ ಮಾಡಿದರು.

Madhu Bangarappa ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಎಸ್ ಪಿ ಜಿ.ಕೆ.ಮಿಥುನ್‌ಕುಮಾರ್, ಶಾಸಕ ಬಿ.ಕೆ.ಸಂಗಮೇಶ್, ಎಸ್.ಎನ್.ಚನ್ನಬಸಪ್ಪ, ಶಾಸಕಿ ಶಾರದಾ ಪೂರ್ಯಾನಾಯ್ಕ್ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಭಾರತಿ ಶೆಟ್ಟಿ, ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...