ನೆನ್ನೆ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಆದ ಅಗ್ನಿ ಅವಗಢವಾದ ಸ್ಥಳಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಾಸ್ತವಿಕ ಪರಿಸ್ಥಿತಿಯನ್ನು ವೀಕ್ಷಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾಗಿದ್ದು, ಈ ಹಿನ್ನಲೆಯಲ್ಲಿ ದೊಡ್ಡ ಅನಾಹುತವೇತಪ್ಪಿದ್ದು ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿ, ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.